ಇಂದು ಮುಂಜಾನೆ ದಾವಣಗೆರೆಯಲ್ಲಿ ಸಿಲಿಂಡರ್ ಸ್ಪೋಟಗೊಂಡು, 6 ಜನರಿಗೆ ಗಂಭೀರ ಗಾಯವಾಗಿರುವ ಘಟನೆ ನಡೆದಿದೆ. ಸಿಲಿಂಡರ್ ಸ್ಫೋಟದ ತೀವ್ರತೆಗೆ ಮನೆ ಮೇಲ್ಟಾವಣಿ ಸಂಪೂರ್ಣವಾಗಿ ಕುಸಿತಗೊಂಡಿದೆ. ಬೆಳಿಗ್ಗೆ ಸಿಲಿಂಡರ್ ಆನ್ ಮಾಡಲು ಹೋದಾಗ ಏಕಾಏಕಿ ಸ್ಪೋಟವಾಗಿದೆ ಎನ್ನಲಾಗಿದೆ. ಕೂಡಲೇ ಗಾಯಾಳುಗಳನ್ನು ಸ್ಥಳೀಯ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ