ಅರಂಬೂರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ (ರಿ ) ಸುಳ್ಯ ತಾಲ್ಲೂಕು ಸುಳ್ಯ ವಲಯ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸುಳ್ಯ ವಲಯ ಇದರ ಸಂಯುಕ್ತ ಆಶ್ರಯದಲ್ಲಿ ಅ.5ರಂದು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಇಡ್ಯಡ್ಕ ಆರಂಬೂರು ಶಾಲೆಯಲ್ಲಿ ನಡೆಯಿತು.
ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡು ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಕ್ರಮದ ಅಡಿಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನು ನಡೆಸಲಾಯಿತು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪರಿವಾರಕಾನ ಒಕ್ಕೂಟದ ಅಧ್ಯಕ್ಷರಾದ ಬಾಲಚಂದ್ರ ಅವರು ವಹಿಸಿದ್ದರು.
ಸುಳ್ಯ ತಾಲೂಕು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಅಧ್ಯಕ್ಷರಾದ ಲೋಕನಾಥ್ ಅಮೆಚೂರು ಅವರು ಮಾತನಾಡಿ ಮಹಾತ್ಮ ಗಾಂಧೀಜಿಯವರು ಕಂಡ ಕನಸು ನನಸಾಗಬೇಕಾದರೆ ಈಗಿನ ವಿದ್ಯಾರ್ಥಿ/ ವಿದ್ಯಾರ್ಥಿನಿಯರು ದುಶ್ಚಟಕ್ಕೆ ಬಲಿಯಾಗದೆ ಜೀವನದಲ್ಲಿ ಸರಿ ತಪ್ಪುಗಳನ್ನು ನಿರ್ದಿಷ್ಟವಾಗಿ ಗಮನಿಸುವ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು. ಇಲ್ಲದಿದ್ದರೆ ನಾವು ದಾರಿ ತಪ್ಪುವ ಸಾಧ್ಯತೆಗಳಿರುತ್ತವೆ ಆದ್ದರಿಂದ ಸರಿಯಾದ ತೀರ್ಮಾನವನ್ನು ತೆಗೆದುಕೊಳ್ಳುವ ಜಾನ್ಮೆ ನಮ್ಮಲ್ಲಿರಬೇಕು. ಹಾಗೆಯೇ ನಮ್ಮನ್ನು ಹಾಗೂ ನಮ್ಮ ಪರಿಸರದವರನ್ನು ದುಶ್ಚಟಕ್ಕೆ ಬಲಿಯಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಹೇಳಿದರು.
ಶ್ರೀ.ಕ್ಷೇ.ಧ. ಗ್ರಾ.ಯೋಜನೆ ಬಿ.ಸಿ ಟ್ರಸ್ಟ್ ಸುಳ್ಯ ವಲಯ ವಲಯ ಮೇಲ್ವಿಚಾರಕಿ ಮುಖ್ಯ ಅತಿಥಿಯಾಗಿ ಭಾಗವಹಿಸಿದರು.
ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡು ಉಪನ್ಯಾಸಕ ಲಿಂಗಪ್ಪ.ಎಂ ಹಾಗೂ ಪ್ರಭಾರ ಪ್ರಾಂಶುಪಾಲರು ಸುರೇಶ್ ವಾಗ್ಲೆಯವರು ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಇಡ್ಯಡ್ಕ ಆರಂಬೂರು ಎಸ್.ಡಿ.ಎಂ.ಸಿ ಅಧ್ಯಕ್ಷ ರಮೇಶ್ ಕೆ
ಸುಳ್ಯ ತಾಲೂಕು ವಿಪತ್ತು ನಿರ್ವಹಣೆ ಘಟಕದ ಮಾಸ್ಟರ್ ಜಯರಾಮರವರು, ವಿದ್ಯಾರ್ಥಿ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.
ಯೋಜನೆಯ ಪರಿವಾರಕಾನ ಕಾರ್ಯಕ್ಷೇತ್ರದ ಸೇವಾ ಪ್ರತಿನಿಧಿ ಸುರೇಶ್ ರವರು ಧನ್ಯವಾದ ಮಾಡಿದರು.