ಬೆಂಗಳೂರು :ಕಳೆದ ಎರಡು ದಿವಸದಿಂದ ಮಳೆಯ ಪ್ರಮಾಣ ಹೆಚ್ಚಾಗಿದ್ದು ರಾಜ್ಯದ ಮುಂದಿನ 10 ದಿನಗಳ ಕಾಲ ಕೆಲವು ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸಿಲಿಕಾನ್ ಸಿಟಿ ಸೇರಿದಂತೆ ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ತುಮಕೂರು, ಮಂಡ್ಯ, ಕೋಲಾರ, ಚಾಮರಾಜನಗರ, ರಾಮನಗರ, ಹಾಸನ, ಚಿಕ್ಕಮಂಗಳೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ವಿಜಯನಗರ, ಕೊಡಗು ಜಿಲ್ಲೆಗಳಲ್ಲಿ ಮಳೆ ಆರ್ಭಟಿಸಲಿದೆ ಎಂದು ಹವಾಮಾನ ಇಲಾಖೆ ಸ್ಪಷ್ಟಪಡಿಸಿದೆ