ಉಡುಪಿ : ದೇವಳದಿಂದ ಚಿನ್ನಾಭರಣ ಕಳವು ಮಾಡಿದ ಪುರೋಹಿತನ್ನು ಪೊಲೀಸರು ಬಂಧಿಸಿರುವ
ಘಟನೆ ಉಡುಪಿಯಿಂದ ವರದಿಯಾಗಿದೆ.
ದೇವಸ್ಥಾನದ ಅರ್ಚಕ ನರಸಿಂಹ ಭಟ್ (43) ಬಂಧಿತ ಆರೋಪಿ.
ಖಾರ್ವಿಕೇರಿ ಶ್ರೀ ಮಹಾಂಕಾಳಿ ದೇವಸ್ಥಾನದಲ್ಲಿ 20 ಲಕ್ಷ ಮೌಲ್ಯದ ಚಿನ್ನಾಭರಣ ಕಳುವಾಗಿದ್ದು, ಕಳ್ಳತನ ಪ್ರಕರಣದಲ್ಲಿ ಭಾಗಿಯಾದ ಆರೋಪಿ ಅರ್ಚಕನನ್ನು ಪೊಲೀಸರು ಬಂಧಿಸಿ ಚಿನ್ನಾಭರವನ್ನು ವಶಪಡಿಸಿಕೊಂಡಿದ್ದಾರೆ.
ಈತ ಗಂಗೊಳ್ಳಿ ಖಾರ್ವಿಕೇರಿ ಶ್ರೀ ಮಹಾಂಕಾಳಿ ದೇವಸ್ಥಾನದಲ್ಲಿ ದೇವಿಯ ಮೈಮೇಲಿದ್ದ ಅಸಲಿ ಚಿನ್ನಾಭರಣಗಳನ್ನು ಕಳ್ಳತನ ಮಾಡಿ, ನಕಲಿ ಚಿನ್ನಾಭರಣಗಳನ್ನು ದೇವಸ್ಥಾನದಲ್ಲಿ ಇರಿಸಿದ್ದ.