ಸುಳ್ಯ ದಸರಾ ಉತ್ಸವಕ್ಕೆ ಅದ್ದೂರಿ ಚಾಲನೆ

ಸುಳ್ಯ : ಸುಳ್ಯ ಶ್ರೀ ಶಾರದಾಂಬ ದಸರಾ ಸೇವಾ ಟ್ರಸ್ಟ್, ಸಾರ್ವಜನಿಕ ಶ್ರೀ ಶಾರದಾಂಬ ಸೇವಾ ಸಮಿತಿ, ದಸರಾ ಉತ್ಸವ ಸಮಿತಿ ಸುಳ್ಯ ತಾಲೂಕು, ಶ್ರೀ ಶಾರದಾಂಬ ಉತ್ಸವ ಸಮಿತಿಯ ವತಿಯಿಂದ 53ನೇ ವರ್ಷದ ಶ್ರೀ ಶಾರದಾಂಬ ಉತ್ಸವ ಸುಳ್ಯ ದಸರಾ -2024 ಸಾಂಸ್ಕೃತಿಕ ಕಾರ್ಯಕ್ರಮವನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷ ಡಾ. ಕೆ.ವಿ. ಚಿದಾನಂದ ಅವರು ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು ಮಹಿಷಾಸುರನನ್ನು ಮರ್ಧನ ಮಾಡಿದ ಚಾಮುಂಡೇಶ್ವರಿ ದೇವಿಯ ಹಬ್ಬವನ್ನಾಗಿ ನವರಾತ್ರಿಯನ್ನು ಆಚರಿಸಲಾಗುತ್ತಿದ್ದು, ಸುಳ್ಯದಲ್ಲಿ ಕಳೆದ ಹಲವಾರು ವರ್ಷಗಳಿಂದ ಶಾರದಾಂಬ ಉತ್ಸವವನ್ನು ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರ ಮೂಲಕ ಸುಳ್ಯ ದಸರಾ ಉತ್ಸವವನ್ನಾಗಿ ನಡೆಸುತ್ತಿದ್ದು, ಇನ್ನಷ್ಟು ವಿಜೃಂಭಣೆಯಿಂದ ದಸರಾ ಉತ್ಸವವು ನಡೆಯಲಿ ಎಂದು ಶುಭಹಾರೈಸಿದರು.
ಶ್ರೀ ಶಾರದಾಂಬ ಉತ್ಸವ ಸಮಿತಿಯ ಅಧ್ಯಕ್ಷ ಡಾ. ಲೀಲಾಧ‌ರ್ ಡಿ. ವಿ. ಅವರು ಅಧ್ಯಕ್ಷತೆ ವಹಿಸಿದ್ದರು.ದಸರಾ ಉತ್ಸವ ಸಮಿತಿ ಸುಳ್ಯ ತಾಲೂಕು ಸಮಿತಿಯನ್ನು ರಚಿಸಿಕೊಂಡು ಅದರ ಪ್ರಥಮ ಅಧ್ಯಕ್ಷರಾಗಿದ್ದ ಮಾಜಿ ಸಚಿವ ಎಸ್. ಅಂಗಾರ ಹಾಗೂ ಶ್ರೀ ಶಾರದಾಂಬ ಸಮಿತಿಯಲ್ಲಿ ಕಳೆದ ಐವತ್ತು ವರ್ಷಗಳಿಂದ ವಿವಿಧ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಿ, ಪ್ರಸ್ತುತ ಶ್ರೀ ಶಾರದಾಂಬ ಸೇವಾ ಸಮಿತಿಯ ಗೌರವಾಧ್ಯಕ್ಷರಾಗಿರುವ ಕೆ. ಗೋಕುಲ್ ದಾಸ್ ಅವರನ್ನು ಸಮಿತಿಯ ವತಿಯಿಂದ ಸನ್ಮಾನಿಸಿ, ಗೌರವಿಸಲಾಯಿತು. ಶಾರದಾಂಬ ಸೇವಾ ಸಮಿತಿಯ ಅಧ್ಯಕ್ಷ ನಾರಾಯಣ ಕೇಕಡ್ಕ ಅವರು ಮಾತನಾಡಿ ಸುಳ್ಯದ ಗಣ್ಯಮಾನ್ಯರನ್ನು ಜೊತೆಗೂಡಿಸಿಕೊಂಡು ಶ್ರೀ ಶಾರದಾಂಬ ಸಮೂಹ ಸಮಿತಿಯನ್ನು ರಚಿಸಿಕೊಳ್ಳಲಾಗಿದ್ದು, ಮುಂದೆಯೂ ಈ ಸಮಿತಿಯ ತಂಡದ ನೇತೃತ್ವದಲ್ಲಿ ದಸರಾ ಕಾರ್ಯಕ್ರಮಗಳು ನಡೆಯುವಂತಾಗಲಿ ಎಂದು ಹೇಳಿದರು.
ಶ್ರೀ ಚೆನ್ನಕೇಶವ ದೇವಾಲಯದ ಅನುವಂಶಿಕ ಮೊಕೇಸರ ಡಾ. ಹರಪ್ರಸಾದ್ ತುದಿಯಡ್ಕ ಅವರು ಮಾತನಾಡಿ ದಸರಾದಲ್ಲಿ ವೈಭವ ಇರಬೇಕು. ಆಗಲೇ ದಸರಾ ಅರ್ಥಪೂರ್ಣವಾಗಲು ಸಾಧ್ಯ ಎಂದು ಹೇಳಿದರು.
ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಮಾದವ ಗೌಡ ಅವರು ಮಾತನಾಡಿ ಹಲವು ವರ್ಷಗಳ ಕಾಲ ಇಲ್ಲಿ ದಸರಾ ಉತ್ಸವ ಯಶಸ್ವಿಯಾಗಿ ನಡೆದಿದಿದ್ದು ಮುಂದೆಯೂ ಯಶಸ್ವಿಯಾಗಿ ದಸರಾ ಉತ್ಸವ ನಡೆಯಲಿ ಎಂದು ಶುಭಹಾರೈಸಿದರು.
ಸನ್ಮಾನಿತರ ಪರವಾಗಿ ಮಾಜಿ ಸಚಿವ ಎಸ್. ಅಂಗಾರ ಅವರು ಮಾತನಾಡಿ ಮೈಸೂರಿಗೆ ಅದರದೇ ಆದ ಮಹತ್ವವಿದೆ. ಸುಳ್ಯಕ್ಕೆ ಮಹತ್ವ ಇಲ್ಲದ ಸಂದರ್ಭದಲ್ಲಿ ಸುಳ್ಯದಲ್ಲಿ ಬೀಜ ಬಿತ್ತಿ ದಸರಾ ಉತ್ಸವ ಸಮಿತಿಯನ್ನು ರಚಿಸಲಾಯಿತು. ಶಾರದಾಂಬ ಸೇವಾ ಸಮಿತಿಯು ಸುಳ್ಯ ದಸರಾ ಉತ್ಸವವಾಗಿ ಪರಿವರ್ತನೆಯಾಗಲು ಕಾಲವೇ ತೀರ್ಮಾನ ಕೈಗೊಂಡಿತು. ಸುಳ್ಯದಲ್ಲಿ ದಸರಾ ಉತ್ಸವ ಪ್ರಾರಂಭವಾಗಿ ಹದಿನಾಲ್ಕು ವರ್ಷಗಳು ಕಳೆದಿದೆ. ಮುಂದಿನ ಪೀಳಿಗೆಗೆ ದಸರಾ ಉತ್ಸವ ಇನ್ನಷ್ಟುವೈಭವದೊಂದಿಗೆ ನಡೆಯಲಿ ಎಂದು ಹೇಳಿದರು.
ಇನ್ನೋರ್ವ ಸನ್ಮಾನಿತರಾದ ಶ್ರೀ ಶಾರದಾಂಬ ಸೇವಾ ಸಮಿತಿಯ ಗೌರವಾಧ್ಯಕ್ಷ ಗೋಕುಲ್ ದಾಸ್ ಅವರು ಮಾತನಾಡಿ ಶಾರದಾಂಬ ಸಮಿತಿಯು ಹಲವಾರು ಏಳುಬೀಳುಗಳನ್ನು ಕಂಡಿದೆ. ಕಳೆದ ಐವತ್ತು ವರ್ಷಗಳಿಂದ ಹಲವಾರು ಸಮಾಜಮುಖಿ ಕೆಲಸಗಳನ್ನು ಸಮಿತಿಯ ವತಿಯಿಂದ ನಾವು ಕೈಗೊಂಡಿದ್ದೇವೆ. ಅಂಗಾರರು ದಸರಾ ಉತ್ಸವ ಸಮಿತಿ ರಚಿಸಿದ ಬಳಿಕದ ವರ್ಷದಲ್ಲಿ ಸುಳ್ಯದ ದಸರಾ ಕಾರ್ಯಕ್ರಮಕ್ಕೆ ಮೆರಗು ಬಂದಿದೆ ಎಂದು ಹೇಳಿದರು.
ಶ್ರೀ ಶಾರದಾಂಬ ಉತ್ಸವ ಸಮಿತಿಯ ಗೌರವಾಧ್ಯಕ್ಷ ಕೃಷ್ಣ ಕಾಮತ್ ಅವರು ಮಾತನಾಡಿ ಮುಂದೆಯೂ ಇದೇ ರೀತಿಯಲ್ಲಿ ಸುಳ್ಯದಲ್ಲಿ ದಸರಾ ಉತ್ಸವ ಕಾರ್ಯಕ್ರಮ ನಡೆಯಲಿ ಎಂದು ಶುಭಹಾರೈಸಿದರು.
ಅಧ್ಯಕ್ಷತೆ ವಹಿಸಿದ್ದ ಡಾ. ಲೀಲಾಧರ್ ಡಿ. ವಿ. ಅವರು ಮಾತನಾಡಿ ಐವತ್ತನೇ ವರ್ಷದಲ್ಲಿ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಸಲು ಸಾಧ್ಯವಾಗದ ಕಾರಣ ಈ ಬಾರಿ ಅತ್ಯಂತ ವಿಜೃಂಭಣೆಯಿಂದ ದಸರಾ ಕಾರ್ಯಕ್ರಮ ಏರ್ಪಡಿಸಿದ್ದೇವೆ. ಒಂಭತ್ತು ದಿನದ ದಸರಾ ಕಾರ್ಯಕ್ರಮಕ್ಕೆ ಈ ಬಾರಿ ವಿಶೇಷವಾಗಿ ಮಹಿಳಾ ತಂಡವು ಬೆನ್ನೆಲುಬಾಗಿ ನಿಂತಿದೆ. ಮೈಸೂರು, ಮಡಿಕೇರಿ, ಮಂಗಳೂರು ದಸರಾದ ಬಳಿಕ ಸುಳ್ಯದ ದಸರಾವು ನಾಲ್ಕನೇ ಅದ್ಧೂರಿ ದಸರಾ ಆಗಿ ಮೂಡಿಬರಲಿ ಎಂದು ಜನತೆ ಆಶೀರ್ವದಿಸಿದ್ದಾರೆ ಎಂದು ಹೇಳಿದರು.
ದಸರಾ ಕ್ರೀಡಾಕೂಟ ಬಹುಮಾನ ವಿತರಣೆ ಈ ಸಂದರ್ಭದಲ್ಲಿ ದಸರಾ ಕ್ರೀಡಾಕೂಟದಲ್ಲಿ ವಿಜೇತರಾದವರಿಗೆ ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿ ಪತ್ರ ವಿತರಿಸಲಾಯಿತು.
ವೇದಿಕೆಯಲ್ಲಿ ದಸರಾ ಉತ್ಸವ ಸಮಿತಿ ಅಧ್ಯಕ್ಷೆ ಭಾಗೀರಥಿ ಮುರುಳ್ಯ, ಶ್ರೀ ಚೆನ್ನಕೇಶವ ದೇವಸ್ಥಾನದ ಅನುವಂಶಿಕ ಮೊಕೇಸರ ಡಾ. ಹರಪ್ರಸಾದ್ ತುದಿಯಡ್ಕ, ಶ್ರೀ ಕ್ಷೇತ್ರ ಧರ್ಮಸ್ಥತೂಗುಸೇತುವೆಗಳ ಸರದಾರ ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್, ಶಾರದಾಂಬ ದಸರಾ ಸೇವಾ ಟ್ರಸ್ಟ್ ಅಧ್ಯಕ್ಷ ನವೀನ್ ಚಂದ್ರ ಕೆ.ಎಸ್., ಕಾರ್ಯದರ್ಶಿ ಎಂ.ಕೆ. ಸತೀಶ್, ದಸರಾ ಉತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಬೂಡು ರಾಧಾಕೃಷ್ಣ ರೈ, ಶ್ರೀ ಶಾರದಾಂಬ ಸೇವಾ ಸಮಿತಿ ಪ್ರಧಾನ ಕಾರ್ಯದರ್ಶಿ ರಾಜು ಪಂಡಿತ್, ಶ್ರೀ ಶಾರದಾಂಬ ಉತ್ಸವ ಸಮಿತಿ ಕೋಶಾಧಿಕಾರಿ ಗಣೇಶ್ ಆಳ್ವ, ಮಹಿಳಾ ಸಮಿತಿಯ ಅಧ್ಯಕ್ಷೆ ಶ್ರೀಮತಿ ಶಶಿಕಲಾ ನೀರಬಿದಿರೆ, ಗೌರವ ಸಲಹೆಗಾರರಾದ ಡಾ. ಯಶೋದಾ ರಾಮಚಂದ್ರ, ಶ್ರೀಮತಿ ಲತಾ ಮಧುಸೂದನ್, ಎಂ. ವೆಂಕಪ್ಪ ಗೌಡ ಉಪಸ್ಥಿತರಿದ್ದರು. ಶಾರದಾಂಬ ಉತ್ಸವ ಸಮಿತಿಯ ಪ್ರಧಾನ ಒಂಭತ್ತು್ಶಿ ಸಂತೋಷ್ ಕುತ್ತಮೊಟ್ಟೆ ಅವರು ಸ್ವಾಗತಿಸಿ, ದಸರಾ ಉತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಬೂಡು ರಾಧಾಕೃಷ್ಣ ರೈ ಅವರು ವಂದಿಸಿದರು.



































































































Leave a Comment

Your email address will not be published. Required fields are marked *

error: Content is protected !!
Scroll to Top