ಸುಳ್ಯದ ಶ್ರೀರಾಮಪೇಟೆಯಲ್ಲಿ ಕಾರೊಂದು ರಸ್ತೆ ಬದಿಯ ತಡೆಬೇಲಿಗೆ ಗುದ್ದಿದ್ದು ಕಾರಿನ ಎದುರು ಭಾಗ ಸಂಪೂರ್ಣ ಹಾನಿಗೊಂಡ ಘಟನೆ ವರದಿಯಾಗಿದೆ.
ಕಾರಿನಲ್ಲಿದ್ದ ಪ್ರಯಾಣಿಕರಿಗೆ ಗಾಯಗಳಾಗಿರುವುದಾಗಿ ತಿಳಿದು ಬಂದಿದೆ. ಬೆಂಗಳೂರಿನಿಂದ ಬಿಸಿ ರೋಡಿಗೆ ಹೋಗುವ ಸ್ಕೊಡ ಕಾರು ಚಾಲಕನ ನಿಯಂತ್ರಣ ತಪ್ಪಿ ತಡೆಬೇಲಿಗೆ ಗುದ್ದಿ ತಡೆಬೇಲಿ ಮುರಿದು ಕಾರು ಸಂಪೂರ್ಣ ಜಖಂಗೊಂಡಿದೆ.