ಸುಳ್ಯ:ಸುಳ್ಯ ಶ್ರೀ ಶಾರದಾಂಬಾ ದಸರಾ ಸೇವಾ ಟ್ರಸ್ಟ್, ಸುಳ್ಯ ಸಾರ್ವಜನಿಕ ಶ್ರೀ ಶಾರದಾಂಬ ಸೇವಾ ಸಮಿತಿ, ದಸರಾ ಉತ್ಸವ ಸಮಿತಿ ಸುಳ್ಯ ತಾಲೂಕು, ಶ್ರೀ ಶಾರದಾಂಬ ಉತ್ಸವ ಸಮಿತಿ ಸುಳ್ಯ ವತಿಯಿಂದ 53ನೇ ವರ್ಷದ ಶ್ರೀ ಶಾರದಾಂಬ ಉತ್ಸವ ‘ಸುಳ್ಯ ದಸರಾ’ ಅ.9 ರಿಂದ ಅ.17ರ ತನಕ ಶ್ರೀ ಚೆನ್ನಕೇಶವದ ದೇವಸ್ಥಾನದ
ಮುಂಭಾಗದ ಶಾರದಾಂಬಾ ಕಲಾ ವೇದಿಕೆಯಲ್ಲಿ ಅದ್ದೂರಿಯಾಗಿ ನಡೆಯುತಿದೆ. ಅ.11ರಂದು ದಿನಪೂರ್ತಿ ಭಜನೋತ್ಸವ ನಡೆಯಿತು ವಿವಿಧ ಭಜನಾ ತಂಡಗಳಿಂದ ಭಜನೆ ಕಾರ್ಯಕ್ರಮ ನಡೆಯಿತು. ಮಧ್ಯಾಹ್ನ ಮಹಾಪೂಜೆ ನಡೆಯಿತು. ರಾತ್ರಿ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಡಾನ್ಸ್ ತಂಡಗಳಿಂದ ಡ್ಯಾನ್ಸ್ ಕಾರ್ಯಕ್ರಮ ನಡೆಯಿತು.