ಉದ್ಯಮಿ ಮುಲ್ತಾಝ್ ಅಲಿ ಸಾವು ಕೇಸ್ ಗೆ ಸಂಬಂಧಿಸಿದಂತೆ ಇಂದು ಪೊಲೀಸರ ತನಿಖೆ ಚುರುಕುಗೊಂಡಿದೆ. ಪ್ರಕರಣದ ಸೂತ್ರದಾರ ಹಾಗೂ ಎ2 ಆರೋಪಿ ಕೃಷ್ಣಾಪುರ ನಿವಾಸಿ ಅಬ್ದುಲ್ ಸತ್ತಾರ್, ಎ3 ಆರೋಪಿ ಮುಹಮ್ಮದ್ ಮುಸ್ತಫಾ, 4ನೇ ಆರೋಪಿ ಬಂಟ್ವಾಳ ತಾಲೂಕಿನ ನಂದಾವರ ನಿವಾಸಿ ಶಾಫಿಯನ್ನು ನಿನ್ನೆ ಕೋರ್ಟ್ ಗೆ ಹಾಜರುಪಡಿಸಿದ್ದ ಕಾವೂರು ಪೊಲೀಸರು, ಏಳು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆದುಕೊಂಡಿದ್ದಾರೆ. ಈ ಮೂವರು ಆರೋಪಿಗಳನ್ನು ಅ. 9ರಂದು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು.