ಪುತ್ತೂರು: ಹಿಂದು ಯುವಕನಿಗೆ ನಾಲ್ವರಿದ್ದ ಯುವಕರ ತಂಡ ರೈಲಿನಲ್ಲಿ ಹಿಗ್ಗಾಮುಗ್ಗಾ ಥಳಿಸಿದ ಘಟನೆ ಇಂದು ಬೆಳಿಗ್ಗೆ ಕಬಕ ಪುತ್ತೂರು ರೈಲು ನಿಲ್ದಾಣದಲ್ಲಿ ನಡೆದಿದೆ ಎಂದು ತಿಳಿದು ಬಂದಿದೆ.
ಹಲ್ಲೆಗೊಳಗಾದ ಯುವಕ ಹಿಂದೂ ಧರ್ಮೀಯ, ಹಲ್ಲೆ ನಡೆಸಿದ ಯುವಕರು ಅನ್ಯಧರ್ಮಿಯರು ಎಂದು ಹೇಳಲಾಗುತ್ತಿದೆ.
ಹಲ್ಲೆ ನಡೆಸಿದ ನಾಲ್ವರನ್ನು ಪುತ್ತೂರು ನಗರ ಠಾಣೆ ಪೊಲೀಸರು ನಾಲ್ವರನ್ನು ಸಾಲ್ಮರ ಮಸೀದಿ ಬಳಿಯಿಂದ ವಶಕ್ಕೆ ಪಡೆದು ಕೊಂಡಿದ್ದಾರೆ. ಪ್ರಕರಣವು ರೈಲ್ವೇ ಪೊಲೀಸರ ವ್ಯಾಪ್ತಿಯಲ್ಲಿ ನಡೆದಿರುವುದರಿಂದ ವಶಕ್ಕೆ ಪಡೆದ ಆರೋಪಿಗಳನ್ನು ರೈಲ್ವೇ ಪೊಲೀಸರಿಗೆ ಹಸ್ತಾಂತರಿಸಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.