ಸುಳ್ಯದ ಶ್ರೀ ಶಾರದಾಂಬ ದಸರಾ ಸೇವಾ ಟ್ರಸ್ಟ್, ಸಾರ್ವಜನಿಕ ಶ್ರೀ ಶಾರದಾಂಬ ಸೇವಾ ಸಮಿತಿ, ದಸರಾ ಉತ್ಸವ ಸಮಿತಿ, ಸುಳ್ಯ ತಾಲೂಕು, ಶ್ರೀ ಶಾರದಾಂಬ ಉತ್ಸವ ಸಮಿತಿ ವತಿಯಿಂದ ಶ್ರೀ ಚೆನ್ನಕೇಶವ ದೇವಸ್ಥಾನದ ಮುಂಭಾಗದಲ್ಲಿ ನಡೆಯುತ್ತಿರುವ 53ನೇ ವರ್ಷದ ಶ್ರೀ ಶಾರದಾಂಬ ಉತ್ಸವ ಸುಳ್ಯ ದಸರಾ -2024 ಆರನೇ ದಿನದ ಸಾಂಸ್ಕೃತಿಕ ಕಾರ್ಯಕ್ರಮವು ಅ.14ರಂದು ರಾತ್ರಿ ಶ್ರೀ ಶಾರದಾಂಬ ಕಲಾವೇದಿಕೆಯಲ್ಲಿ ಮಣಿಕಂಠ ಮಹಿಮೆ ಮಹಿಳೆ ತುಳು ನಾಟಕ ಪ್ರದರ್ಶನಗೊಂಡು ಭಕ್ತರ ಮನರಂಜಿಸಿತು.
ರಾತ್ರಿ ಶ್ರೀದೇವಿಗೆ ಮಹಾಪೂಜೆ, ಸಾರ್ವಜನಿಕ ಅನ್ನಸಂತರ್ಪಣೆ ನಡೆದ ಬಳಿಕ ಶಿವದೂತೆ ಗುಳಿಗೆ ಖ್ಯಾತಿಯ ಕಲಾಸಂಗಮ ಕಲಾವಿದರಿಂದ ವಿಜಯಕುಮಾರ್ ಕೊಡಿಯಾಲ್ ಬೈಲ್ ನಿರ್ದೇಶನದ ಭಕ್ತಿಪ್ರಧಾನ ತುಳು ನಾಟಕ ಅದ್ಧೂರಿಯಾಗಿ ಪ್ರದರ್ಶನಗೊಂಡಿತು.ಈ ಸಂದರ್ಭದಲ್ಲಿ ಸಾವಿರಾರು ಭಕ್ತರು ಉಪಸ್ಥಿತರಿದ್ದರು.