ಸುಳ್ಯದ ಶ್ರೀ ಶಾರದಾಂಬ ದಸರಾ ಸೇವಾ ಟ್ರಸ್ಟ್, ಸಾರ್ವಜನಿಕ ಶ್ರೀ ಶಾರದಾಂಬ ಸೇವಾ ಸಮಿತಿ, ದಸರಾ ಉತ್ಸವ ಸಮಿತಿ ಸುಳ್ಯ ತಾಲೂಕು, ಶ್ರೀ ಶಾರದಾಂಬ ಉತ್ಸವ ಸಮಿತಿಯ ವತಿಯಿಂದ ಶ್ರೀ ಚೆನ್ನಕೇಶವ ದೇವಾಲಯದ ಮುಂಭಾಗದಲ್ಲಿ ಜರುಗುತ್ತಿರುವ 53ನೇ ವರ್ಷದ ಶ್ರೀ ಶಾರದಾಂಬ ಉತ್ಸವ ಸುಳ್ಯ ದಸರಾ 2024 ಶೋಭಾಯಾತ್ರೆಗೆ ಚಾಲನೆ ನೀಡಲಾಯಿತು.
ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹಾಗೂ ದಸರಾ ಉತ್ಸವ ಸಮಿತಿ ಅಧ್ಯಕ್ಷೆ ಹಾಗೂ ಶಾಸಕಿ ಭಾಗೀರಥಿ ಮುರುಳ್ಯ ಅವರು ಶೋಭಾಯಾತ್ರೆಗೆ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಶ್ರೀ ಶಾರದಾಂಬ ಉತ್ಸವ ಸಮಿತಿ ಗೌರವಾಧ್ಯಕ್ಷ ಕೃಷ್ಣಕಾಮತ್, ಶ್ರೀ ಶಾರದಾಂಬ ಸೇವಾ ಸಮಿತಿ ಗೌರವಾಧ್ಯಕ್ಷ ಗೋಕುಲ್ ದಾಸ್, ಅಧ್ಯಕ್ಷ ನಾರಾಯಣ ಕೇಕಡ್ಕ, ಉತ್ಸವ ಸಮಿತಿ ಅಧ್ಯಕ್ಷ ಡಾ. ಲೀಲಾಧರ್ ಡಿ. ವಿ., ಶ್ರೀ ಶಾರದಾಂಬ ದಸರಾ ಸೇವಾ ಟ್ರಸ್ಟ್ ನವೀನ್ ಚಂದ್ರ ಕೆ.ಎಸ್., ಉತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಸಂತೋಷ್ ವಕುತ್ತಮೊಟ್ಟೆ, ಸೇವಾ ಸಮಿತಿ ಕಾರ್ಯದರ್ಶಿ ರಾಜು ಪಂಡಿತ್, ಶ್ರೀ ಶಾರದಾಂಬ ದಸರಾ ಉತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಬೂಡು ರಾಧಾಕೃಷ್ಣ ರೈ ಸೇರಿದಂತೆ ಶ್ರೀ ಶಾರದಾಂಬ ದಸರಾ ಉತ್ಸವದ ಸಮೂಹ ಸಮಿತಿಯ ಪದಾಧಿಕಾರಿಗಳು ಹಾಗೂ ಭಕ್ತಾದಿಗಳು ನೂರಾರು ಮಂದಿ ಉಪಸ್ಥಿತರಿದ್ದರು.