ಹಿಂದೂ ಯುವತಿಯರ ಬಗ್ಗೆ ಅವಹೇಳನ ಮಾಡಿರುವುದಾಗಿ ಪಂಜ ಉಪವಲಯಾರಣ್ಯಾಧಿಕಾರಿ ವಿರುದ್ದ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಗುರುವಾರ ಪ್ರಕರಣ ದಾಖಲಾದ ಘಟನೆ ವರದಿಯಾಗಿದೆ. ಪಂಜ ಅರಣ್ಯ ಇಲಾಖೆ ಉಪವಲಯಾರಣ್ಯಾಧಿಕಾರಿ ಸಂಜೀವ ಪೂಜಾರಿಯವರು ಹಿಂದೂ ಯುವತಿಯರ ಬಗ್ಗೆ ಅವಹೇಳನಕಾರಿಯಾಗಿ ಮಾತಾಡಿರುವುದಾಗಿ ಸಚಿನ್ ವಳಲಂಬೆ ಎಂಬವರು ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಈ ಬಗ್ಗೆ ಪ್ರಕರಣ ದಾಖಲಾಗಿರುವುದಾಗಿ ಮಾಹಿತಿ ದೊರೆತ್ತಿದೆ.ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ.