ಸಿಕಂದರಾಬಾದ್ : ಸಿಕಂದರಾಬಾದ್ ಮನೆಯೊಂದರಲ್ಲಿ ಸೋಮವಾರ ರಾತ್ರಿ ಸಿಲಿಂಡರ್ ಸ್ಫೋಟಗೊಂಡು ಐವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಸ್ಫೋಟದಿಂದಾಗಿ ಮನೆಯ ಒಂದು ಭಾಗ ಕುಸಿದಿದೆ.ರಕ್ಷಣ ಕಾರ್ಯಾಚರಣೆ ನಡೆಯುತ್ತಿದೆ ಎಂದು ಮೀರತ್ ವಲಯದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಧ್ರುವ ಕಾಂತ್ ಠಾಕೂರ್ ತಿಳಿಸಿದ್ದಾರೆ.
ರಿಯಾಜುದ್ದೀನ್ ಎಂಬುವರ ಮನೆಯಲ್ಲಿ ರಾತ್ರಿ 8.30 ರಿಂದ 9 ರ ನಡುವೆ ಈ ಘಟನೆ ಸಂಭವಿಸಿದ್ದು, ಮನೆಯಲ್ಲಿ ಸುಮಾರು 19 ಜನರು ವಾಸಿಸುತ್ತಿದ್ದರು.ಎಂಟು ಜನರನ್ನು ರಕ್ಷಿಸಿ ಆಸ್ಪತ್ರೆಗೆ ಸೇರಿಸಲಾಯಿತು.ಕೆಲವರ ಸ್ಥಿತಿ ತುಂಬಾ ಗಂಭೀರವಾಗಿದೆ” ಎಂದು ಅವರು ಹೇಳಿದ್ದಾರೆ.