ಬೆಂಗಳೂರಿನಲ್ಲಿ ಭಾರೀ ಮಳೆ ಸುರಿಯುತ್ತಿದ್ದು ಬೆಂಗಳೂರು ಜನರ ಜೀವನ ಅಸ್ತವ್ಯಸ್ತಗೊಂಡಿದೆ.
ಭಾರೀ ಮಳೆ ನಡುವೆ ನಗರದ ಕೆಂಗೇರಿ ಬಳಿ ಅಣ್ಣ, ತಂಗಿ ನಿನ್ನೆಯಿಂದ ನಾಪತ್ತೆಯಾಗಿದ್ದು, ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ. ಅಣ್ಣ ಶ್ರೀನಿವಾಸ್ ಶ್ರೀನಿವಾಸನ ತಂಗಿ ನಾಪತ್ತೆಯಾದ ಮಕ್ಕಳು ಮಳೆನೀರಿನಲ್ಲಿ ಕೊಚ್ಚಿಹೋಗಿರುವ ಶಂಕೆ ವ್ಯಕ್ತವಾಗಿದೆ. ಇನ್ನು ನಾಪತ್ತೆಯಾಗಿರುವ ಮಕ್ಕಳಿಗಾಗಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.