ಬಸ್ಸಲ್ಲಿ ಹೆರಿಗೆ ನೋವು ಕಾಣಿಸಿಕೊಂಡು ಅವಳಿ ಮಕ್ಕಳಿಗೆ ಜನ್ಮ ನೀಡಿದ ತಾಯಿ

ಗರ್ಭಿಣಿ ಹೆಂಗಸೊಬ್ಬರು ಹೆರಿಗೆ ನೋವು ಕಾಣಿಸಿಕೊಂಡು ತಪಾಸಣೆಗೆ ತಾಲೂಕು ಆಸ್ಪತ್ರೆಗೆ ಕೆ.ಎಸ್.ಆರ್.ಟಿ.ಸಿ ಬಸ್‌ನಲ್ಲಿ ಹೋಗುತ್ತಿದ್ದಾಗ ಮಾರ್ಗ ಮಧ್ಯೆದಲ್ಲಿ ಬಸ್ಸಿನಲ್ಲೇ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ.
ಬಸ್‌ನಲ್ಲೇ ಅವಳಿ ಮಕ್ಕಳಿಗೆ ಜನ್ಮ ನೀಡಿದ ಮಹಿಳೆಯನ್ನು ಕನಕಪುರ ತಾಲೂಕಿನ ಕೋಡಿಹಳ್ಳಿ ಹೋಬಳಿಯ ರಜಿಯಭಾನು ಎಂದು ಗುರುತಿಸಲಾಗಿದೆ.
ರಜಿಯಾಭಾನು 7 ತಿಂಗಳ ಗರ್ಭಿಣಿಯಾಗಿದ್ದು, ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಈಕೆ ಹುಣಸನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತಪಾಸಣೆಗೆ ಹೋದಾಗ ವೈದ್ಯರು ತಪಾಸಣೆ ನಡೆಸಿ ಅಲ್ಲಿಂದ ಹೊಸದುರ್ಗ ಸಮುದಾಯ ಆರೋಗ್ಯಕೇಂದ್ರಕ್ಕೆ ಹೋಗುವಂತೆ ತಿಳಿಸಿದ್ದಾರೆ.
ಬಸ್‌ನಲ್ಲೇ ಅವಧಿ ಪೂರ್ವ ಹೆರಿಗೆ ಆಗಿದ್ದು, ಸಾರಿಗೆ ಸಂಸ್ಥೆ ಚಾಲಕ ಮತ್ತು ನಿರ್ವಾಹಕರು ಬಸ್‌ನ್ನು ನಗರದ ಹೆರಿಗೆ ಆಸ್ಪತ್ರೆಗೆ ಸಾಗಿಸಿದ್ದು, ಆಸ್ಪತ್ರೆ ಸಿಬ್ಬಂದಿ ತಕ್ಷಣ ಧಾವಿಸಿ ತಾಯಿ ಮಕ್ಕಳ ಆರೈಕೆ ಮಾಡಿದ್ದಾರೆ. ಏಳು ತಿಂಗಳಿಗೆ ಮಕ್ಕಳ ಜನನವಾಗಿದ್ದು, ತೂಕ ಕಡಿಮೆ ಇರುವುದರಿಂದ ಮಕ್ಕಳನ್ನು ಐಸಿಯುನಲ್ಲಿ ದಾಖಲಿಸಿ ಆರೈಕೆ ಮಾಡಬೇಕು. ತಾಲೂಕಿನಲ್ಲಿ ಅಂತಹ ವ್ಯವಸ್ಥೆ ಇಲ್ಲವಾಗಿದ್ದು, ಬೆಂಗಳೂರಿನ ವಾಣಿವಿಲಾಸ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ.

Ad Widget . Ad Widget . Ad Widget . . Ad Widget . . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top