ಬೆಂಗಳೂರು : ಇಲ್ಲಿನ ನಗರದಲ್ಲಿ ನಿರ್ಮಾಣ ಹಂತದ ಕಟ್ಟಡವೊಂದು ಕುಸಿದು ಬಿದ್ದ ಪರಿಣಾಮ ಅದರ ಅವಶೇಷಗಳ ಅಡಿಯಲ್ಲಿ ಸಿಲುಕಿ ಮೂವರು ದುರ್ಮರಣ ಹೊಂದಿರುವುದಾಗಿ ತಿಳಿದು ಬಂದಿದೆ. ಬೆಂಗಳೂರಲ್ಲಿ ಭಾರಿ ಮಳೆಯಾಗುತ್ತಿದ್ದು, ಹಲವಾರು ಪ್ರದೇಶಗಳಲ್ಲಿ ಅವಾಂತರಗಳು ಸೃಷ್ಟಿಯಾಗುತ್ತಿವೆ. ಇದೀಗ ಬೆಂಗಳೂರಿನ ಬಾಬುಸಾಬ್ ಪಾಳ್ಯದಲ್ಲಿ 16 ಅಂತಸ್ತಿನ ನಿರ್ಮಾಣ ಹಂತದ ಕಟ್ಟಡ ಒಂದು ಕುಸಿದು ಬಿದ್ದಿದ್ದು,ಕಟ್ಟಡದ ಅವಶೇಷಗಳಡಿ 16 ಕಾರ್ಮಿಕರು ಸಿಲುಕಿರುವ ಶಂಕೆ ವ್ಯಕ್ತವಾಗಿತ್ತು. ಇವರಲ್ಲಿ ಮೂವರು ದುರ್ಮರಣ ಹೊಂದಿರುವುದಾಗಿ ತಿಳಿದು ಬಂದಿದೆ.