ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು . ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಘಟಕ
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಗಡಿ ಭಾಗಗಳಲ್ಲಿ ಅರೆಭಾಷೆ ಗಡಿನಾಡ ಉತ್ಸವ – 2024 ನಡೆಯಲಿದ್ದು, ಅ.27ರಂದು ಮೊದಲ ಗಡಿನಾಡ ಉತ್ಸವ ಬಂದಡ್ಕದಲ್ಲಿ ನಡೆಯಲಿದೆ. ಇದರ ಆಮಂತ್ರಣ ಬಿಡುಗಡೆ ಸಮಾರಂಭ ಅ.18ರಂದು ಸುಳ್ಯದ ಕನ್ನಡ ಭವನದಲ್ಲಿ ನಡೆಯಿತು.
ಅರೆಭಾಷೆ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿಯವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಹಿರಿಯ ಸಾಹಿತಿ ಕುತ್ಯಾಳ ನಾಗಪ್ಪ ಗೌಡರು ಆಮಂತ್ರಣ ಬಿಡುಗಡೆಗೊಳಿಸಿದರು. ಬಳಿಕ ನಾಗಪ್ಪ ಗೌಡರನ್ನು ಅಕಾಡೆಮಿಯಿಂದ ಗೌರವಿಸಲಾಯಿತು.
ಗೌಡರ ಯುವ ಸೇವಾ ಸಂಘದ ಅಧ್ಯಕ್ಷ ಪಿ.ಎಸ್.ಗಂಗಾಧರ್ ಮುಖ್ಯ ಅತಿಥಿಗಳಾಗಿದ್ದರು.
ಬಂದಡ್ಕ ಗ್ರಾಮ ಗೌಡ ಸಮಿತಿ ಅಧ್ಯಕ್ಷ ವೆಂಕಟ್ರಮಣ ಕೊಯಿಂಗಾಜೆ, ಅಕಾಡೆಮಿ ನಿರ್ದೇಶಕರುಗಳಾದ ಡಾ.ಎನ್.ಎ.ಜ್ಞಾನೇಶ್, ಚಂದ್ರಾವತಿ ಬಡ್ಡಡ್ಕ ಇದ್ದರು.
ಅರೆಭಾಷೆ ಅಕಾಡೆಮಿ ಸದಸ್ಯ ಚಂದ್ರಶೇಖರ ಪೇರಾಲು ಕಾರ್ಯಕ್ರಮ ನಿರ್ವಹಿಸಿದರು. ಅಕಾಡೆಮಿ ಸದಸ್ಯೆ ಲತಾ ಕುದ್ರಾಜೆ ವಂದಿಸಿದರು.