ಪುತ್ತೂರು ಬೈಪಾಸ್ ರಸ್ತೆಯಲ್ಲಿ ಸ್ಕೊರ್ಪಿಯೊ ವಾಹನ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಘಟನೆ ನ.5 ರಂದು ನಸುಕಿನ ಜಾವ ನಡೆದಿದೆ.
ಮಂಗಳೂರಿಗೆ ತೆರಳುತ್ತಿದ್ದ ಸ್ಕೊರ್ಪಿಯ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತಡೆಬೇಲಿಗೆ ಮತ್ತು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬ ತುಂಡಾಗಿದ್ದು ಕಾರು ಜಖಂಗೊಂಡಿದೆ. ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ತೆರಳಿ ಮಾಹಿತಿ ಪಡೆದು ಕೊಂಡಿದ್ದಾರೆ.