ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಇಂದು ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ 2 ಗಂಟೆ ವಿಚಾರಣೆ ಎದುರಿಸಿದ್ದರು. ಈ ವೇಳೆ ನಗುಮುಖದಿಂದಲೇ ಕಚೇರಿಯಿಂದ ಹೊರ ಬಂದ ಸಿಎಂ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಮತ್ತೆ ವಿಚಾರಣೆಗೆ ಬರಲು ಲೋಕಾಯುಕ್ತ ಅಧಿಕಾರಿಗಳು ಹೇಳಿಲ್ಲ. ಕಾನೂನು ಪ್ರಕಾರವೇ ನಿವೇಶನ ಪಡೆದಿದ್ದೇನೆ. ಬಿಜೆಪಿ, ಜೆಡಿಎಸ್ ನನ್ನ ವಿರುದ್ಧ ಸುಳ್ಳು ಆರೋಪ ಮಾಡಿವೆ. ಲೋಕಾಯುಕ್ತ ಅಧಿಕಾರಿಗಳು ಕೇಳಿದ ಎಲ್ಲಾ ಪ್ರಶ್ನೆಗೆ ಉತ್ತರಿಸಿದ್ದೇನೆ ಎಂದು ತಿಳಿಸಿದರು.