ನರಗುಂದ : ಭೈರನಹಟ್ಟಿ ಗ್ರಾಮದ ಬಳಿ ಕುಕ್ಕೆ ಸುಬ್ರಹ್ಮಣ್ಯದಿಂದ ಹಿಂದುರುಗುತ್ತಿದ್ದಾಗ ಕಾರು ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾಗಿ, ಕಾರಿನಲ್ಲಿದ್ದ ದಂಪತಿಗಳಿಬ್ಬರು ಮೃತಪಟ್ಟಿದ್ದು. ಅವರಿಬ್ಬರ ಮಕ್ಕಳಿಗೆ ಗಂಭೀರ ಗಾಯಗಳಾಗಿವೆ.
ಮೃತರನ್ನು ಬಾಗಲಕೋಟೆ ಮೂಲದ ಸಿದ್ದರಾಮ ಮತ್ತು ಹೇಮಾ ಎಂದು ಗುರುತಿಸಲಾಗಿದೆ. ಗಾಯಗೊಂಡ ಮಕ್ಕಳಾದ ಮಲ್ಲಿಕಾರ್ಜುನ ಮತ್ತು ಸಹನ ಅವರನ್ನು ತಕ್ಷಣ ನರಗುಂದ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಹುಬ್ಬಳ್ಳಿ ವಿಜಯಪುರ ರಾಷ್ಟ್ರೀಯ ಹೆದ್ದಾರಿ 218ರಲ್ಲಿ ಬೆಳಗ್ಗೆ ಈ ಅಪಘಾತ ಸಂಭವಿಸಿದೆ.
ಕುಟುಂಬವು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಿಂದ ಪೂಜೆ ಮುಗಿಸಿ ಮನೆಗೆ ಹಿಂದುರುವಾಗ ಬರುವಾಗ ಈ ಅಪಘಾತ ಸಂಭವಿಸಿದೆ.