ಜಾರ್ಖಂಡ್‌ನಲ್ಲಿ ಮೊದಲ ಹಂತದ ಮತದಾನಕ್ಕೂ ಮುನ್ನ ಕಾಂಗ್ರೆಸ್‌ಗೆ ದೊಡ್ಡ ಹೊಡೆತ ಬಿದ್ದಿದೆ. ಕಾಂಗ್ರೆಸ್ ಹಿರಿಯ ನಾಯಕ ಆದಿತ್ಯ ವಿಕ್ರಮ್ ಜೈಸ್ವಾಲ್ ಸೋಮವಾರ ಬಿಜೆಪಿ ಸೇರಿದರು. ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಮಂತ್ರಿ ಅಮಿತ್ ಶಾ ಸೇರಿದಂತೆ ಬಿಜೆಪಿ ನಾಯಕರ ಅಭಿವೃದ್ಧಿ ಕೆಲಸಗಳಿಂದ ಬಿಜೆಪಿ ಸೇರ್ಪಡೆಯಾಗಿದ್ದೇನೆ ಎಂದ ಅವರು ಹೇಳಿದ್ದಾರೆ. ನಮ್ಮ ಕುಟುಂಬ ಕಳೆದ ಐದು ತಲೆಮಾರುಗಳಿಂದ ಕಾಂಗ್ರೆಸ್‌ನಲ್ಲಿದೆ. ಆದರೆ ಈ ಚುನಾವಣೆಯಲ್ಲಿ ನನಗೆ ಟಿಕೆಟ್ ನಿರಾಕರಿಸಲಾಯಿತು. ಜಾರ್ಖಂಡ್‌ನ ಅಭಿವೃದ್ಧಿಗೆ ಬಿಜೆಪಿ ಸರ್ಕಾರ ಅನಿವಾರ್ಯ ಎಂದರು.
ಕಾಂಗ್ರೆಸ್ ಹಿರಿಯ ನಾಯಕ ಆದಿತ್ಯ ವಿಕ್ರಮ್ ಜೈಸ್ವಾಲ್ ಬಿಜೆಪಿ ಸೆರ್ಪಡೆ





















































