ನ.15ನೇ ಶುಕ್ರವಾರ ಬೆಳಿಗ್ಗೆ 10:30ಕ್ಕೆ ಗುಂಡ್ಯದಲ್ಲಿ ನಡೆಯುವ ಕಸ್ತೂರಿರಂಗನ್ ವರದಿಯನ್ನು ವಿರೋಧಿಸಿ ನಡೆಯುವ ಪ್ರತಿಭಟನೆ ಸಲುವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಭಾದಿತ ಗ್ರಾಮದ ಅಂಗಡಿ ಹೋಟೆಲ್ ಉದ್ಯಮಿಗಳು ಸ್ವಯಂ ಪ್ರೇರಣೆಯಿಂದ ಬಂದ್ ಮಾಡಿ ಈ ಕಾರ್ಯಕ್ರಮದಲ್ಲಿ ರೈತರ ಪರವಾಗಿ ಭಾಗವಹಿಸಬೇಕಾಗಿ ಮಲೆನಾಡು ಹಿತರಕ್ಷಣಾ ವೇದಿಕೆಯ ಸಂಚಾಲಕ ಕಿಶೋರ್ ಶಿರಾಡಿ ಮಾದ್ಯಮ ಹೇಳಿಕೆಯ ಮೂಲಕ ವಿನಂತಿಸಿಕೊಂಡಿದ್ದಾರೆ.