ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆಗಳ ಅನಾವರಣಕ್ಕೆ ಪ್ರತಿಭಾ ಕಾರಂಜಿ ಸೂಕ್ತ ವೇದಿಕೆ : ಭಾಗೀರಥಿ ಮುರುಳ್ಯ

ಸುಳ್ಯ: ಪ್ರತಿಭಾ ಕಾರಂಜಿ ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆಗಳ ಅನಾವರಣಕ್ಕೆ ಉತ್ತಮ ವೇದಿಕೆ.ವಿದ್ಯಾರ್ಥಿಗಳು ಪ್ರತಿಭೆಯನ್ನು ತೋರ್ಪಡಿಸುವ ಮೂಲಕ ವೇದಿಯನ್ನು ಸದುಪಯೋಗಪಡಿಸಿ ಎಂದು ಶಾಸಕಿ ಭಾಗೀರಥಿ ಮುರುಳ್ಯ ಹೇಳಿದ್ದಾರೆ. ದ.ಕ.ಜಿಲ್ಲಾ ಪಂಚಾಯತ್, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿಗಳ ಕಚೇರಿ ಸುಳ್ಯ ಹಾಗೂ ವಿವೇಕಾನಂದ ವಿದ್ಯಾಸಂಸ್ಥೆಗಳು ವಿನೂಬನಗರ ಇದರ ಸಹಭಾಗಿತ್ವದಲ್ಲಿ ವಿನೂಬನಗರ ವಿದ್ಯಾಸಂಸ್ಥೆಯಲ್ಲಿ ಎರಡು ದಿನಗಳ ಕಾಲ ನಡೆಯುವ ತಾಲೂಕು ಮಟ್ಟದ
ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ನ.13ರಂದು ಉದ್ಘಾಟಿಸಿ ಅವರು ಮಾತನಾಡಿದರು.
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವಜಿ ಮಾತನಾಡಿ ಶಿಕ್ಷಣದ ಜೊತೆಗೆ ಮಕ್ಕಳಿಗೆ ಕಲೆ, ಸಂಸ್ಕೃತಿ ಹಾಗೂ ಸಂಸ್ಕಾರವನ್ನು ಕಲಿಸಬೇಕು. ವಿದ್ಯಾರ್ಥಿಗಳ ಪ್ರತಿಭೆಗಳು ಪ್ರತಿಭಾ ಕಾರಂಜಿಯ ಮೂಲಕ ಹೊರ ಹೊಮ್ಮಲಿ ಎಂದು ಹೇಳಿದರು.
ಜಾಲ್ಸೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ತಿರುಮಲೇಶ್ವರಿ ಡಿ. ಅಧ್ಯಕ್ಷತೆ ವಹಿಸಿದ್ದರು. ಸುಳ್ಯ ತಹಶೀಲ್ದಾರ್ ಮಂಜುಳಾ ಎಂ. ಜಾಲ್ಲೂರು ಗ್ರಾ.ಪಂ. ಉಪಾಧ್ಯಕ್ಷೆ ತಿರುಮಲೇಶ್ವರಿ.ಸದಸ್ಯೆ ಲೀಲಾವತಿ, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಚಂದ್ರಶೇಖರ ಪೇರಾಲು, ಕನಕಮಜಲು ಪ್ರಾಥಮಿಕ ಕೃಷಿಪತ್ರಿನ ಸಹಕಾರಿ ಸಂಘದ ಅಧ್ಯಕ್ಷ ನಾರಾಯಣ ಗೌಡ ಬೊಮ್ಮೆಟ್ಟಿ, ಉದ್ಯಮಿ ಸುಧಾಕರ ಕಾಮತ್ ಮುಖ್ಯ ಅತಿಥಿಗಳಾಗಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ಶೀತಲ್.ಯು.ಕೆ, ವಿವೇಕಾನಂದ ವಿದ್ಯಾ ಸಂಸ್ಥೆಗಳ ಅಧ್ಯಕ್ಷ ನ.ಸೀತಾರಾಮ, ಸಂಚಾಲಕ ಡಾ.ಗೋಪಾಲಕೃಷ್ಣ ಭಟ್ ಕಾಟೂರು, ವೀಣಾ ಎಂ.ಟಿ, ಶಾಲಾ ಶಿಕ್ಷಣ ಇಲಾಖೆಯ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಆಶಾ ನಾಯಕ್ ಅತಿಥಿಗಳಾಗಿ ಉಪಸ್ಥಿತರಿದ್ದರು.
ಪ್ರೌಢ ಶಾಲಾ ಮುಖ್ಯೋಪಾಧ್ಯಾಯರ ಸಂಘದ ಅಧ್ಯಕ್ಷ ಪ್ರಕಾಶ್‌ ಮೂಡಿತ್ತಾಯ, ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷೆ ಧನಲಕ್ಷಿ ಕುದ್ದಾಜೆ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶ್ರೀಧರ ಗೌಡ, ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕರ ಸಂಘದ ಅಧ್ಯಕ್ಷ ದೇವರಾಜ, ಪದವೀಯೇತರ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸುನಿಲ್ ಕುಮಾರ್ ಎ.ಎಂ, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಸೂಫಿ ಪೇರಾಜೆ ಉಪಸ್ಥಿತರಿದ್ದರು.

Ad Widget . Ad Widget . Ad Widget . . Ad Widget . . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top