ಸುಳ್ಯ ವಿಧಾನ ಸಭಾ ಕ್ಷೇತ್ರದಲ್ಲಿ KSRTC ಬಸ್ಸುಗಳ ಕೊರತೆ ಎದುರಾಗಿದ್ದು ಸಮಸ್ಯೆಗಳನ್ನು ಸರಿಪಡಿಸುವ ನಿಟ್ಟಿನಲ್ಲಿ ನ.14ರಂದು ಸಾರಿಗೆ ಸಚಿವರಾದ ರಾಮಲಿಂಗ ರೆಡ್ಡಿಯವರನ್ನು ಶಾಸಕಿ ಭಾಗೀರಥಿ ಮುರುಳ್ಯ ಭೇಟಿಯಾಗಿ ಶಾಲೆ, ಕಾಲೇಜು ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆ ಆಗದ ರೀತಿಯಲ್ಲಿ ಬಸ್ಸಿನ ವ್ಯವಸ್ಥೆಯನ್ನು ಕಲ್ಪಿಸುವಂತೆ ವಿನಂತಿಸಿದರು. ಕೆಳದಿನಗಳ ಹಿಂದೆ ಸಚಿವರಿಗೆ ಕರೆಯ ಮೂಲಕ ಸಮಸ್ಯೆಗಳನ್ನು ತಿಳಿಸಿದ್ದರು. ಸಚಿವರು ಒಂದು ವಾರದ ಒಳಗೆ 10ಬಸ್ಸುಗಳನ್ನು ಒದಗಿಸುವಂತೆ KSRTC DCಗೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಕ್ಷೇತ್ರದ ವಿವಿದ ದೇವಾಲಯದ ಜೀರ್ಣೊದ್ದಾರಕ್ಕೆ ಅನುದಾನವನ್ನು ಬಿಡುಗಡೆ ಮಾಡುವಂತೆಯೂ ವಿನಂತಿಸಿದರು.