ಪೆರಾಜೆಯ ಕಲ್ಬರ್ಪೆ ಬಳಿ ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿಗೆ ಮರ ಬಿದ್ದ ಹಿನ್ನೆಲೆಯಲ್ಲಿ ರಸ್ತೆ ತಡೆ ಉಂಟಾಗಿದ್ದು ಇದೀಗ ಮರವನ್ನು ತೆರವುಗೊಳಿಸಿದ ಹಿನ್ನಲೆಯಲ್ಲಿ ರಸ್ತೆ ವಾಹನಗಳ ಸಂಚಾರಕ್ಕೆ ಮುಕ್ತವಾಗಿದೆ.
ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಸ್ಥಳೀಯರು ಸೇರಿ ಮರವನ್ನು ತೆರವುಗೊಳಿಸಿ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ತಮಿಳುನಾಡು ಮೂಲದ ದೋಸ್ತ್ ವಾಹನವೊಂದು ಸಂಚಾರ ಮಾಡುತ್ತಿದ್ದ ಸಮಯದಲ್ಲಿಯೇ ಈ ಮರ ಬಿದ್ದಿದೆ. ಅದರಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.ಎರಡು ವಿದ್ಯುತ್ ಕಂಬಗಳು ಮರಿದು ಬಿದ್ದಿವೆ.ಕೆಲವು ಕಿ.ಮೀ ದೂರ ಒಂದುವರೆ ಗಂಟೆಗೂ ಅಧಿಕ ಸಮಯ ಟ್ರಾಫಿಕ್ ಜಾಮ್ ಉಂಟಾಯಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.