ಬೆಳ್ತಂಗಡಿ ತಾಲೂಕು ನಿಡ್ಲೆ ಗ್ರಾಮದ ಕೊಡಂಗೆ ಎಂಬಲ್ಲಿ ಹರಿಯುವ ನದಿಯಲ್ಲಿ ಅಡ್ಡವಾಗಿ ಬಿದ್ದಿರುವ ಮರದ ಕೊಂಬೆಯಲ್ಲಿ ಅಪರಿಚಿತ ಗಂಡಸಿನ ಕೊಳೆತ ಸ್ಥಿತಿಯಲ್ಲಿರುವ ಮೃತದೇಹವೊಂದು ಪತ್ತೆಯಾಗಿದೆ. ಮೃತ ದೇಹವನ್ನು ದೇರಳಕಟ್ಟೆ ಕೆ. ಎಸ್. ಹೆಗ್ಡೆ ಆಸ್ಪತ್ರೆಯ ಶೀತಲಿಕರಣ ಶವಗಾರದಲ್ಲಿ ಇರಿಸಲಾಗಿದೆ. ಮೃತ ವ್ಯಕ್ತಿಯ ಗುರುತು/ವಾರಿಸುದಾರರು ಪತ್ತೆಯಾದಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಯನ್ನು ಸಂರ್ಕಿಸುವಂತೆ ಪೊಲೀಸ್ ಪ್ರಕಟಣೆಯಲ್ಲಿಂದು ತಿಳಿಸಲಾಗಿದೆ.