ಪುತ್ತೂರು ತಾಲೂಕಿನ ಕಲ್ಲಾರೆಯ ಕಟ್ಟಡದ ಮಹಡಿಯಿಂದ ಬಿದ್ದು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಫಾತಿಮತ್ ನಿಶ್ಚಾ (17) ಅವರು ಭಾನುವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಅವರು ಪುತ್ತೂರಿನ ಕಮ್ಯೂನಿಟಿ ಸೆಂಟರ್‌ನ ಸ್ಥಾಪಕ ಹನೀಫ್ ಪುತ್ತೂರು ಅವರ ಪುತ್ರಿ. ಕಲ್ಲಾರೆಯ ಫ್ಲ್ಯಾಟ್‌ವೊಂದರಲ್ಲಿ ವಾಸವಾಗಿದ್ದ ಅವರು ಮೂರು ದಿನಗಳ ಹಿಂದೆ ಮನೆಯ ಮಹಡಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಆಯ ತಪ್ಪಿ ಕೆಳಗೆ ಬಿದ್ದಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.