ಪುತ್ತೂರು ನಗರದ ಪಿ.ಜಿ.ಯೊಂದರಲ್ಲಿದ್ದ ಕಾಸರಗೋಡು
ಮೂಲದ ಅಪ್ರಾಪ್ತೆಯನ್ನು ಪುಸಲಾಯಿಸಿ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಗುಲ್ಬರ್ಗಾ ಮೂಲದ ಯುವಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿಕೊಂಡು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಪುತ್ತೂರಿನ ಪ್ರತಿಷ್ಠಿತ ಕಾಲೇಜೊಂದರ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಪಿ.ಜಿ.ಯಿಂದ ಕಾಲೇಜಿಗೆ ಹೋಗುತ್ತಿದ್ದಳು.
ವಿದ್ಯಾರ್ಥಿನಿಯನ್ನು ಗುಲ್ಬರ್ಗಾದ ಕಾರ್ತಿಕ್ ಎಂಬಾತ ಪುಸಲಾಯಿಸಿ ಕರೆದುಕೊಂಡು ಹೋಗಿ ಲೈಂಗಿಕ ಕಿರುಕುಳ ನೀಡಿರುವುದಾಗಿ ಪೊಲೀಸ್ ತನಿಖೆ ವೇಳೆ ಬೆಳಕಿಗೆ ಬಂದಿದೆ.
ಈ ಹಿನ್ನೆಲೆಯಲ್ಲಿ ಪೋಕ್ಸೊ ಪ್ರಕರಣ ದಾಖಲಿಸಿಕೊಂಡಿರುವ ಮಹಿಳಾ ಠಾಣೆ ಪೊಲೀಸರು ನ.17ರಂದು ಆರೋಪಿ ಕಾರ್ತಿಕ್ ನನ್ನು ಗುಲ್ಬರ್ಗಾದಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ಬಂಧಿತ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ತಿಳಿದು ಬಂದಿದೆ.