ದ.ಕ. ಜಿಲ್ಲೆಯ ಪ್ರಸಿದ್ಧ ತೀರ್ಥ ಕ್ಷೇತ್ರವಾದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಕ್ರಿಕೇಟಿಗ ಸೂರ್ಯಕುಮಾರ್ ಯಾದವ್ ಹಾಗೂ ಅವರ ಪತ್ನಿ ದಿವೀಶಾ ಶೆಟ್ಟಿ ಅವರು ಮಂಗಳವಾರ ಭೇಟಿ ನೀಡಿದರು.
ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದ ಸೂರ್ಯಕುಮಾರ್ ಯಾದವ್ ದಂಪತಿ ಶ್ರೀ ದೇವರ ದರ್ಶನ ಪಡೆದು ಮಹಾಭಿಷೇಷ ಸೇವೆ ನೆರವೇರಿಸಿದರು. ಬಳಿಕ ಪ್ರಸಾದ ಸ್ವೀಕರಿಸಿದರು. ಶ್ರೀ ದೇವಳದ ವತಿಯಿಂದ ಸೂರ್ಯಕುಮಾರ್ ಯಾದವ್ ದಂಪತಿಯನ್ನು ಗೌರವಿಸಲಾಯಿತು. ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ, ಸಹಾಯಕ ಕಾರ್ಯನಿರ್ವಹಣಾಧಿಕಾರಿ ಯೇಸುರಾಜ್ ಮತ್ತಿತರರು ಉಪಸ್ಥಿತರಿದ್ದರು.
ಶ್ರೀ ಸಂಪುಟ ನರಸಿಂಹ ಸ್ವಾಮಿ ಸುಬ್ರಹ್ಮಣ್ಯ ಮಠದಲ್ಲಿ ಸೂರ್ಯಕುಮಾರ್ ಯಾದವ್ ಅವರು ಆಶ್ಲೇಷ ಬಲಿ ಸೇವೆ ನೆರವೇರಿಸಿದರು. ಬಳಿಕ ಮಠದ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಅವರ ಆಶೀರ್ವಾದ ಪಡೆದರು.