ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶತಮಾನೋತ್ಸವ ಸಂಭ್ರಮದಲ್ಲಿದ್ದು ಶತಮಾನೋತ್ಸವ ಕಾರ್ಯಕ್ರಮ ನ.23ರಂದು ನಡೆಯಲಿದೆ. ಬೆಳಿಗ್ಗೆ 10ಕ್ಕೆ ಶತಮಾನೋತ್ಸವ ಸಂಭ್ರಮವನ್ನು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಉದ್ಘಾಟಿಸಲಿದ್ದಾರೆ. ಸಹಕಾರಿ ಸಂಘದ ಅಧ್ಯಕ್ಷ ವೆಂಕಟ್ ದಂಬೆಕೋಡಿ ‘ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ
ಶಾಸಕಿ ಭಾಗೀರಥಿ ಮುರುಳ್ಯ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲು, ಮಾಜಿ ಸಚಿವ ಎಸ್. ಅಂಗಾರ, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕರುಗಳಾದ ಶಶಿಕುಮಾರ್ ರೈ ಬಾಲೊಟ್ಟು, ಎಸ್. ಎನ್. ಮನ್ಮಥ, ದ.ಕ. ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ, ಕ್ಯಾಂಪ್ಲೋ ನಿರ್ದೆಶಕ ಕೃಷ್ಣಪ್ರಸಾದ್ ಮಡ್ತಿಲ
ಗುತ್ತಿಗಾರು ಗ್ರಾ.ಪಂ. ಅಧ್ಯಕ್ಷೆ ಸುಮಿತ್ರ ಮೂಕಮಲೆ, ದೇವಚಳ್ಳ ಗ್ರಾ.ಪಂ. ಅಧ್ಯಕ್ಷ ಶೈಲೇಶ್ ಅಂಬೆಕಲ್ಲು, ಗುತ್ತಿಗಾರು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಂಘದ ಅಧ್ಯಕ್ಷ ಸಹಕಾರ ರತ್ನ ನಿತ್ಯಾನಂದ ಮುಂಡೋಡಿ, ಗುತ್ತಿಗಾರು ಸಹಕಾರಿ ಸಂಘದ ಮಾಜಿ ಅಧ್ಯಕ್ಷ ಮುಳಿಯ ತಿಮ್ಮಪ್ಪಯ್ಯ ಅವರು ವೇದಿಕೆಯಲ್ಲಿ ಉಪಸ್ಥಿತರಿರಲಿದ್ದಾರೆ. ಅ.2.30ರಿಂದ ಶತಮಾನೋತ್ಸವದ ಪ್ರಯುಕ್ತ ಕೃಷಿ ವಿಚಾರಗೋಷ್ಠಿ, ನಡೆಯಲಿದೆ. ಸಂಜೆ 7ರಿಂದ ‘ಮಂಗಳೂರಿನ ಲಕುಮಿ ತಂಡದ ಕುಸಾಲ್ದ ಕಲಾವಿದರಿಂದ ‘ಒರಿಯಾಂಡಲಾ ಸರಿಬೋಡು’ ಹಾಸ್ಯಮಯ ನಾಟಕ ಪ್ರದರ್ಶನಗೊಳ್ಳಲಿದೆ ಎಂದು ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ವೆಂಕಟ್ ದಂಬೆಕೋಡಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.