ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಯಲ್ಲಿ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಭಾರಿ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಪಶ್ಟಿಮ ಬಂಗಾಳದಲ್ಲಿನ ವಾಯುಭಾರ ಕುಸಿತ ತೀವ್ರಗೊಂಡಿದೆ. ಹೀಗಾಗಿ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಚಂಡಮಾರುತವುಂಟಾಗಿದ್ದು, ಫೆಂಗಲ್ ಚಂಡಮಾರುತ ತಮಿಳುನಾಡು ಕರಾವಳಿಗೆ ಅಪ್ಪಳಿಸಿದೆ. ಪರಿಣಾಮ ರಾಜ್ಯಾದ್ಯಂತ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ.
ತಮಿಳುನಾಡು, ಪುದುಚೆರಿ ಭಾಗಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ತಮಿಳುನಾಡಿನ ನಾಲ್ಕು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಮುಂದಿನ ನಾಲ್ಕು ದಿನಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ನ.27ರಂದು ತಮಿಳುನಾಡಿನ ಎರಡು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಚಂಡಮಾರುತ ನ.27ರಂದು ತೀವ್ರಗೊಳ್ಳಲಿದ್ದು, ಬಳಿಕ ಉತ್ತರ-ವಾಯುವ್ಯ ಕಡೆ ಚಲಿಸಲಿದೆ. ಬಳಿಕ ಶ್ರೀಲಂಕಾ ಕರಾವಳಿಯತ್ತ ಚಲಿಸಲಿದ್ದು, ಭಾರಿ ಮಳೆಯಾಗಲಿದೆ. ಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲಿಯೂ ಮಳೆಯಾಗಲಿದ್ದು, ಮುಂದಿನ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ.