ಬೆಳ್ತಂಗಡಿ ಸಮೀಪದ ವೇಣೂರು ಬರ್ಕಜೆ ಡ್ಯಾಂ ಬಳಿ ನದಿಗೆ ಈಜಲು ತೆರಳಿದ ಮೂವರು ಯುವಕರು ನೀರುಪಾಲಾಗಿರುವ ಘಟನೆ ಬುಧವಾರ ವರದಿಯಾಗಿದೆ.
ತಾಲೂಕಿನ ಮೂಡುಕೋಡಿ ಗ್ರಾಮದ ವಾಲ್ಟರ್ ಎಂಬವರ ಮನೆಗೆ ಕಾರ್ಯಕ್ರಮವೊಂದರ ಹಿನ್ನೆಲೆ ಬಂದಿದ್ದ ಮೂಡುಬಿದಿರೆ ತಾಲೂಕಿನ ಎಡಪದವು ನಿವಾಸಿ ಲಾರೆನ್ಸ್, ಬೆಳ್ತಂಗಡಿ ತಾಲೂಕಿನ ಪಾರೆಂಕಿ ಗ್ರಾಮದ ಸೂರಜ್, ಬಂಟ್ವಾಳ ಗ್ರಾಮದ ವಗ್ಗದ ಜೈಸನ್, ಎಂಬವರು ನ.27 ರಂದು ಊಟ ಮೂಗಿಸಿ ಮೂಡುಕೋಡಿ ಗ್ರಾಮದ ಬರ್ಕಜೆ ಡ್ಯಾಂ ಬಳಿ ನದಿಗೆ ಈಜಲು ತೆರಳಿದ್ದರು.
ಈ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಮೂವರು ಯುವಕರು ಸಾವನ್ನಪ್ಪಿದರು. ಮೃತದೇಹಗಳನ್ನು ನೀರಿನಿಂದ ಹೊರ ತೆಗೆಯಲಾಗಿದ್ದು. ಈ ಬಗ್ಗೆ ವೇಣೂರು ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.ಮೂವರು ಮಂಗಳೂರಿನಲ್ಲಿ ನರ್ಸಿಂಗ್ ವಿದ್ಯಾರ್ಥಿಗಳಾಗಿದ್ದಾರೆ ಎಂದು ತಿಳಿದು ಬಂದಿದೆ.