ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಗೆ ಜೈಲು ಶಿಕ್ಷೆ ವಿಧಿಸಿ ತೀರ್ಪು

ಪುತ್ತೂರು : ಪುತ್ತೂರಿನ ಮೊಟೆತ್ತಡ್ಕದಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಅಪರಾಧಿಗೆ ಪುತ್ತೂರು 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 5 ವರ್ಷ ಜೈಲು ಶಿಕ್ಷೆ 40 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.ಮೊಟೆತ್ತಡ್ಕ ಮಸೀದಿ ಬಳಿಯ ನಿವಾಸಿ ಅಬ್ದುಲ್ ರಹಿಮಾನ್ ಜೈಲು ಶಿಕ್ಷೆಗೆ ಒಳಗಾದ ಆರೋಪಿ
2016ರ ನ. 18ರಂದು ಕೆಮ್ಮಿಂಜೆ ಗ್ರಾಮದ ಮೊಟ್ಟೆತಡ್ಕದಲ್ಲಿ ಅಬ್ದುಲ್ ರಹಿಮಾನ್ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ. ಈ ಬಗ್ಗೆ ಬಾಲಕಿ ದೂರು ನೀಡಿದ್ದು, ಪುತ್ತೂರು ನಗರ ಪೊಲೀಸ್‌ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಿಸಿಕೊಂಡು ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆಯನ್ನು ಪುತ್ತೂರು 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸರಿತಾ ಡಿ. ಅವರು ಕೈಗೆತ್ತಿಕೊಂಡು ಒಟ್ಟು 17 ಸಾಕ್ಷಿದಾರರನ್ನು ವಿಚಾರಣೆಗೆ ಒಳಪಡಿಸಿದ್ದರು. ಆರೋಪಿ ತಪ್ಪಿತಸ್ಥನೆಂದು ತೀರ್ಮಾನಿಸಿ ಆರೋಪಿಗೆ ಜೈಲು ಶಿಕ್ಷೆ ವಿಧಿಸಿದ್ದಾರೆ. .

Ad Widget . Ad Widget . Ad Widget . . Ad Widget . . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top