ಗುಜರಾತ್‌ನ ಸೂರತ್‌ನ ಅಲ್ತಾನಾ ವಾರ್ಡ್ ನಂ.30ರ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ದೀಪಿಕಾ ಪಟೇಲ್ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.
ದೀಪಿಕಾ ತಮ್ಮ ನಿವಾಸದಲ್ಲಿಯೇ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ. ದೀಪಿಕಾ ಅವರ ಸಂಬಂಧಿಕರು ಕೊಲೆಯಾಗಿರುವ ಶಂಕೆ ವ್ಯಕ್ತಪಡಿಸಿದ್ದಾರೆ. ಮರಣೋತ್ತರ ಪರೀಕ್ಷೆಗೆ ಸಂಬಂಧಿಕರು ಒತ್ತಾಯಿಸಿದ್ದಾರೆ. ದೀಪಿಕಾ ಹಲವು ವರ್ಷಗಳಿಂದ ಬಿಜೆಪಿ ಕಾರ್ಯಕರ್ತೆಯಾಗಿ ಸಕ್ರಿಯರಾಗಿದ್ದರು.
ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ದೀಪಿಕಾ ಪಟೇಲ್ ಆತ್ಮಹತ್ಯೆ,ಕಾರಣ ನಿಗೂಡ!
