ಕೆಪಿಸಿಸಿ ಕಾರ್ಯಧ್ಯಕ್ಷರು, ವಿಧಾನ ಪರಿಷತ್ ಶಾಸಕರಾದ ಮಂಜುನಾಥ ಭಂಡಾರಿಯವರು ಸುಳ್ಯಕ್ಕೆ ಭೇಟಿ ನೀಡಲಿದ್ದು ಅವರ ಉಪಸ್ಥಿತಿಯಲ್ಲಿ ಸುಳ್ಯ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಭೆಯು ಡಿ.04 ರಂದು ನಡೆಯಲಿದೆ.
ಅಂದು ಅಪರಾಹ್ನ 3:00 ಗಂಟೆಗೆ ಯುವಜನ ಸಂಯುಕ್ತ ಮಂಡಳಿ ಸಭಾಂಗಣದಲ್ಲಿ ಸಭೆ ನಡೆಯಲಿದೆ. ಈ ಸಭೆಗೆ ಪಕ್ಷದ ಹಿರಿಯ ಕಿರಿಯ ನಾಯಕರು, ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳು, ಎಲ್ಲಾ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು, ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಿ ಸಿ ಜಯರಾಮ್ ಪರವಾಗಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪಿ ಎಸ್ ಗಂಗಾಧರ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.