ಸುಳ್ಯ: ದೀನದಯಾಳ್ ಸಹಕಾರ ಸಂಘ ನಿಯಮಿತ ಡಿ.7ರಂದು (ನಾಳೆ) ಸುಳ್ಯದಲ್ಲಿ ಉದ್ಘಾಟನೆಯಾಗಲಿದೆ. ಸುಳ್ಯದ ಟಿ.ಎ.ಪಿ.ಸಿ.ಎಂ.ಎಸ್. ಬಿಲ್ಡಿಂಗ್‌ನ 2 ನೇ ಮಹಡಿಯಲ್ಲಿ ನೂತನ ಸಹಕಾರ ಸಂಘ ಆರಂಭವಾಗಲಿದೆ. ದೀನದಯಾಳ್ ರೂರಲ್ & ಅರ್ಬನ್ ಡೆವಲಪ್‌ಮೆಂಟ್ ಟ್ರಸ್ಟ್‌ನ ನೇತೃತ್ವದಲ್ಲಿ ನೂತನ ಸಹಕಾರ ಸಂಘ ಕಾರ್ಯನಿರ್ವಹಿಸಲಿದೆ. ಡಿ.7ರಂದು ಪೂ.11.22ರ ಶುಭ ಮುಹೂರ್ತದಲ್ಲಿ
ನೂತನ ಸಹಕಾರ ಸಂಘವನ್ನು ದ.ಕ.ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಉದ್ಘಾಟಿಸಲಿದ್ದಾರೆ. ಸಂಸದ ಕ್ಯಾಬ್ರಿಜೀಶ್ ಚೌಟ, ಶಾಸಕಿ ಭಾಗೀರಥಿ ಮುರುಳ್ಯ ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್, ಮಂಜುನಾಥ ಭಂಡಾರಿ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್, ಟಿಎಪಿಸಿಎಂಎಸ್ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಮಾಜಿ ವಿಧಾನ ಪರಿಷತ್ ಸದಸ್ಯ ಅಣ್ಣಾ ವಿನಯಚಂದ್ರ ಸಹಕಾರ ಸಂಘಗಳ ಉಪ ನಿರ್ದೇಶಕ ರಮೇಶ್ ಎನ್.ಎಚ್., ಸಹಕಾರ ಸಂಘಗಳ ಸಹಾಯಕ ನಿರ್ದೇಶಕ ರಘು, ಸುಳ್ಯ ತಾಲೂಕು ಆರ್.ಎಸ್.ಎಸ್. ಸಂಘ ಚಾಲಕರಾದ ಚಂದ್ರಶೇಖರ ತಳೂರು, ಆರ್.ಎಸ್.ಎಸ್. ಕರ್ನಾಟಕ ದಕ್ಷಿಣ ಪ್ರಾಂತ ಸಹ ಸೇವಾ ಪ್ರಮುಖ್ ನ.ಸೀತಾರಾಮ, ಟಿಎಪಿಸಿಎಂಎಸ್ ಕಾರ್ಯದರ್ಶಿ ಜಯರಾಮ ದೇರಪ್ಪಜ್ಜನಮನೆ, ಸುಳ್ಯ ಬಿಜೆಪಿ ಅಧ್ಯಕ್ಷ ವೆಂಕಟ್ ವಳಲಂಬೆ ಮುಖ್ಯ ಅತಿಥಿಗಳಾಗಿರುವರು. ಲೆಕ್ಕ ಪರಿಶೋಧಕರಾದ ಶ್ರೀಪತಿ ಭಟ್, ರಾಜ್ಯಮೊಗೇರ ಸಂಘದ ಅಧ್ಯಕ್ಷ ನಂದರಾಜ ಸಂಕೇಶ, ಮೊಗೇರ ಅಧ್ಯಯನ ಟ್ರಸ್ಟ್ ಅಧ್ಯಕ್ಷರಾದ ಡಾ. ರಘು ಬೆಳ್ಳಿಪ್ಪಾಡಿ ಗೌರವ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಸಹಕಾರ ಸಂಘದ ಲೋಕಾರ್ಪಣೆ ಬಳಿಕ 11.30 ರಿಂದ ಸುಳ್ಯದ ಕೇರ್ಪಳ ದುರ್ಗಾಪರಮೇಶ್ವರಿ ಕಲಾ ಮಂದಿರದಲ್ಲಿ ಸಭೆ ನಡೆಯಲಿದೆ ಎಂದು ಸಹಕಾರ ಸಂಘದ ಮುಖ್ಯ ಪ್ರವರ್ತಕರಾದ ಮಾಜಿ ಸಚಿವ ಎಸ್. ಅಂಗಾರ ತಿಳಿಸಿದ್ದಾರೆ.