.ವಿ.ಜಿ. ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ದಿ.ಡಾ.ಕುರುಂಜಿ ವೆಂಕಟ್ರಮಣ ಗೌಡರ ಜನ್ಮ ದಿನಾಚರಣೆ ಪ್ರಯುಕ್ತ ಕೆ.ವಿ.ಜಿ. ಸುಳ್ಯ ಹಬ್ಬವನ್ನು ದ.25 ಮತ್ತು ದ.26 ರಂದು ನಡೆಯಲಿದ್ದು ಈ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ ಬುಧವಾರ ಸುಳ್ಯ ಹಬ್ಬ ಕಚೇರಿಯಲ್ಲಿ ನಡೆಯಿತು.ಸಮಿತಿಯ ಗೌರವಾಧ್ಯಕ್ಷ ಡಾ.ಕೆ.ವಿ.ಚಿದಾನಂದರು ಆಮಂತ್ರಣ ಪತ್ರ ಬಿಡುಗಡೆಗೊಳಿಸಿದರು. ಸಮಿತಿಯ ಸ್ಥಾಪಕಾಧ್ಯಕ್ಷ ಎನ್.ಜಯಪ್ರಕಾಶ ರೈ ಮತ್ತು ಮಾಜಿ ಅಧ್ಯಕ್ಷೆ ಮೀನಾಕ್ಷಿ ಗೌಡರು ಶುಭಹಾರೈಸಿದರು. ಸಮಿತಿ ಅಧ್ಯಕ್ಷ ಡಾ.ಜ್ಞಾನೇಶ್ ಎನ್.ಎ. ಅಧ್ಯಕ್ಷತೆ ವಹಿಸಿ ಮಾತನಾಡಿದರು.ಪ್ರಧಾನ ಕಾರ್ಯದರ್ಶಿ ರಾಜು ಪಂಡಿತ್, ಕೋಶಾಧಿಕಾರಿ ಎಂ.ಎನ್.ಶ್ರೀಕೃಷ್ಣ, ಡಾ.ಸಾಯಿ ಗೀತಾ ಉಪಸಮಿತಿ ಸಂಚಾಲಕರುಗಳು, ಮಾಜಿ ಅಧ್ಯಕ್ಷರುಗಳು, ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.