ರಸ್ತೆ ಅಭಿವೃದ್ಧಿಗೆ ಎಲ್ಲ ಶಾಸಕರಿಗೆ ಪಕ್ಷ ಭೇದ ಮರೆತು ಅನುದಾನ ಹಂಚಿಕೆ : ಸಿದ್ಧ ರಾಮಯ್ಯ

ರಸ್ತೆಗಳ ಅಭಿವೃದ್ಧಿಗೆ ಎಲ್ಲ ಕ್ಷೇತ್ರಗಳಿಗೂ ಪಕ್ಷಾತೀತವಾಗಿ 2 ಸಾವಿರ ಕೋಟಿ ರೂ. ವಿತರಣೆ ಮಾಡಲಾಗುವುದು. ಈ ಮೂಲಕ ನಮ್ಮಶಾಸಕರು ಎದೆ ಎತ್ತಿ ಮಾತನಾಡುವ ಮೂಲಕ ವಿಪಕ್ಷದವರ ಬಾಯಿ ಮುಚ್ಚಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ಯಲ್ಲಿ ಅವರು ಮಾತನಾಡಿದರು. ಮಳೆ ಹಾನಿ ಸರಿಪಡಿಸಲು ಹೆಚ್ಚುವರಿಯಾಗಿ 4 ಸಾವಿರ ಕೋಟಿ ರೂ., ಗ್ರಾಮೀಣ ರಸ್ತೆ ಹಾಳಾಗಿರುವುದಕ್ಕೆ 2 ಸಾವಿರ ಕೋಟಿ ರೂ. ಸಹಿತ ನಗರ, ಪಟ್ಟಣ ರಸ್ತೆಗಳಿಗೂ ಹೆಚ್ಚುವರಿ ಹಣ ಕೊಡಲಾಗುವುದು.
ರಾಜ್ಯದ ಜನತೆ ಈಗಲೂ ನಮ್ಮ ಪರ ಇದ್ದಾರೆ. ಮುಂದಿನ ಚುನಾವಣೆಯಲ್ಲೂ ನಮ್ಮ ಪರ ಇರುತ್ತಾರೆ. ಇದು ಖಚಿತ ಎಂದು ಸಿದ್ದರಾಮಯ್ಯ ಹೇಳಿದರು.

Ad Widget . Ad Widget . Ad Widget . . Ad Widget . . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top