ಕಲ್ಲುಗುಂಡಿಯ ಮೇಲಿನ ಪೇಟೆಯಲ್ಲಿ ಕಾರು ಪಲ್ಟಿಯಾದ ಘಟನೆ ಗುರುವಾರ ವರದಿಯಾಗಿದೆ.
ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಸುಳ್ಯದಿಂದ ಮಡಿಕೇರಿ ಕಡೆ ಹೋಗುತ್ತಿದ್ದ ಟ್ಯಾಕ್ಸಿ ಕಾರು ಚಾಲಕನ ನಿಯಂತ್ರಣ ತಪ್ಪಿ ಕಲ್ಲುಗುಂಡಿಯ ಮೇಲಿನ ಪೇಟೆಯಲ್ಲಿ ಮರಕ್ಕೆ ಡಿಕ್ಕಿ ಹೊಡೆದಿದೆ.ಪ್ರಯಾಣಿಕರು ಗಾಯಗೊಂಡು ಅಪಾಯದಿಂದ ಪಾರಾಗಿದ್ದಾರೆ.