ಸೂರಿಕುಮೇರು ಎಂಬಲ್ಲಿ ನಿನ್ನೆ ತಡರಾತ್ರಿ ಬೈಕ್ ಹಾಗೂ ಟೆಂಪೋ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಅಮರ ಮುಡ್ನೂರು ಗ್ರಾಮದ ಮರ್ಗಿಲಡ್ಕ ನಿವಾಸಿ ಪುನೀತ್( 30) ಮ್ರತಪಟ್ಟಿದ್ದಾರೆ.
ಮಂಗಳೂರಿನಲ್ಲಿ ಕೋಸ್ಟಲ್ ಕೋಳಿ ಫಾರ್ಮ್ ನಲ್ಲಿ ಚಾಲಕರಾಗಿದ್ದ ಅವರು ಕೆಲಸ ಮುಗಿಸಿ ಮನೆಗೆ ಬೈಕ್ ನಲ್ಲಿ ಬರುತ್ತಿದ್ದಾಗ ಸೂರಿಕುಮೇರು ರಾಜ್ಯ ಹೆದ್ದಾರಿಯಲ್ಲಿ ಟೆಂಪೊ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಮೃತ ಪಟ್ಟಿರುವುದಾಗಿ ತಿಳಿದು ಬಂದಿದೆ.