ಮನೆಯಲ್ಲಿ ಭಾರೀ ಬೆಂಕಿ ಅವಘಡ: ನಾಲ್ವರು ದುರ್ಮರಣ

ಮಧ್ಯಪ್ರದೇಶದ ದೇವಾಸ್ ಜಿಲ್ಲೆಯ ನಯಾಪುರ ಪ್ರದೇಶದ ಮನೆಯೊಂದರಲ್ಲಿ ಶನಿವಾರ ಮುಂಜಾನೆ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಈ ಬೆಂಕಿ ಅವಘಡದಲ್ಲಿ ನಾಲ್ವರು ಸಜೀವ ದಹನವಾಗಿದ್ದಾರೆ. ಮಾಹಿತಿ ಪಡೆದ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ. ಈ ಘಟನೆಯಲ್ಲಿ ಪತಿ ಪತ್ನಿ ಹಾಗೂ ಇಬ್ಬರು ಮಕ್ಕಳು ಸುಟ್ಟ ಗಾಯಗಳಿಂದ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ

Ad Widget . Ad Widget . Ad Widget . . Ad Widget . . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top