ಲಾರಿ ಉದ್ಯಮಿ ಆತ್ಮ ಹತ್ಯೆ ,ಪತ್ನಿಗೆ ಮಾಜಿ ಕುಲಸಚಿವನೊಂದಿಗೆ ಅಕ್ರಮ ಸಂಬಂಧ

ಉದ್ಯಮಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್‌ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮಹಾಲಕ್ಷ್ಮೀ ಲೇಔಟ್‌ ನಿವಾಸಿ ಎಂ.ಜಿ. ಸೋಮಶೇಖರ್‌(47) ಆತ್ಮಹತ್ಯೆ ಮಾಡಿಕೊಂಡವರು.
ಭಾನುವಾರ ರಾತ್ರಿ 11 ಗಂಟೆಗೆ ಸೋಮಶೇಖರ್‌ ಮನೆಯ ಕೋಣೆಯಲ್ಲೇ ಫ್ಯಾನ್‌ಗೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅದನ್ನು ಗಮನಿಸಿದ ಪತ್ನಿ ಹಾಗೂ ಮಕ್ಕಳು ನೇಣಿನ ಕುಣಿಕೆಯಿಂದ ಕೆಳಗೆ ಇಳಿಸಿ, ಕೂಡಲೇ ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಸೋಮವಾರ ಬೆಳಗ್ಗೆ 11 ಗಂಟೆಗೆ ಸೋಮಶೇಖರ್‌ ಮೃತಪಟ್ಟಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದರು.
ಮೃತ ಸೋಮಶೇಖರ್‌ ಲಾರಿ ವ್ಯವಹಾರ ಮಾಡುತ್ತಿದ್ದು, 2005ನೇ ಸಾಲಿನಲ್ಲಿ ಪವಿತ್ರಾ ಎಂಬವರನ್ನು ಮದುವೆಯಾಗಿದ್ದರು. ದಂಪತಿಗೆ ಇಬ್ಬರು ಮಕ್ಕಳು ಇದ್ದರು. ಪಿಯುಸಿ ಮುಗಿಸಿದ್ದ ಪವಿತ್ರಾಳನ್ನು ಮದುವೆ ಬಳಿಕ ಸೋಮಶೇಖರ್‌ ಕಾಲೇಜಿಗೆ ಸೇರಿಸಿ ಬಿ.ಕಾಂ ಓದಿಸಿದ್ದರು. ಬಳಿಕ ಪವಿತ್ರಾ ಗುತ್ತಿಗೆ ಆಧಾರದ ಮೇಲೆ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಕೆಲಸ ಮಾಡುತ್ತಿದ್ದರು. ಕಳೆದ ಎರಡು ವರ್ಷಗಳಿಂದ ಕೌಟುಂಬಿಕ ಕಾರಣಗಳಿಗೆ ದಂಪತಿ ನಡುವೆ ಆಗಾಗ ಜಗಳವಾಗುತ್ತಿತ್ತು ಎಂಬುದು ಗೊತ್ತಾಗಿದೆ. ಈ ಕುರಿತು ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತ ಸೋಮಶೇಖರ್‌ ಪತ್ನಿ ಪವಿತ್ರಾಗೆ ಬೆಂಗಳೂರು ವಿಶ್ವವಿದ್ಯಾಲಯದ ಮಾಜಿ ಕುಲಸಚಿವರೊಬ್ಬರ ಜತೆಗೆ ಅಕ್ರಮ ಸಂಬಂಧ ಇತ್ತು. ಈ ವಿಚಾರ ಸೋಮಶೇಖರ್‌ಗೆ ಗೊತ್ತಾಗಿ ಆತನ ಸಂಪರ್ಕ ಕಡಿದುಕೊಳ್ಳುವಂತೆ ಹಲವು ಬಾರಿ ಹೇಳಿದ್ದರು. ಆದರೂ ಪವಿತ್ರಾ ಆತನೊಂದಿಗೆ ಅಕ್ರಮ ಸಂಬಂಧ ಮುಂದುವರಿಸಿದ್ದರು. ಅದರಿಂದ ಸೋಮಶೇಖರ್‌ ಚಿತ್ರಹಿಂಸೆ ಅನುಭವಿಸಿದ್ದರು. ಸೋಮಶೇಖರ್‌ ಆತ್ಮಹತ್ಯೆಗೆ ಪತ್ನಿ ಪವಿತ್ರಾ ಹಾಗೂ ಮಾಜಿ ಕುಲಸಚಿವನೇ ಕಾರಣ ಎಂದು ಮೃತನ ತಂಗಿಯ ಪತಿ ನಾಗರಾಜು ಮಾಧ್ಯಮಗಳ ಮುಂದೆ ಆರೋಪಿಸಿದ್ದಾರೆ.ತನಿಖೆಯಿಂದ ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ.

Ad Widget . Ad Widget . Ad Widget 1 Ad Widget 1 Ad Widget . Ad Widget . . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top