ಬೆಳ್ಳಾರೆ ಕೆಪಿಎಸ್ ನಲ್ಲಿ ಶಿಕ್ಷಣ ಸಂಸ್ಥೆಗಳ ವಸಂತ ಸಂಭ್ರಮ ಯಶಸ್ವಿಯಾಗಿ ನಡೆದಿದೆ.ಇದೊಂದು ಮಾದರಿ ಕಾರ್ಯಕ್ರಮ.
ವಿದ್ಯಾರ್ಥಿಗಳಿಗೆ ಪ್ರಾಥಮಿಕ ಹಂತದ ಶಿಕ್ಷಣ ಗಟ್ಟಿಯಾಗಬೇಕು.ಆಗ ಮುಂದಿನ ಶಿಕ್ಷಣ ಗಟ್ಟಿಯಾಗುತ್ತದೆ.
ಆರೋಗ್ಯ ಮತ್ತು ವಿದ್ಯೆ ಇದ್ದರೆ ಜನರು ನಾಡಿನಲ್ಲಿ ಪ್ರಬುದ್ಧರಾಗಲು ಸಾಧ್ಯ.ಗ್ರಾಮೀಣ ಪ್ರದೇಶದಲ್ಲಿ ಶಿಕ್ಷಣದ ಬಗ್ಗೆ ಮೌನ ಕ್ರಾಂತಿ ನಡೆಯಬೇಕು.ಕನ್ನಡ ಮಾಧ್ಯಮವನ್ನು ಬಲಾಡ್ಯವಾಗಿ ಕಟ್ಟುವ ಅಗತ್ಯ ನಮ್ಮ ನಿಮ್ಮ ನಮ್ಮೇಲ್ಲರ ಹೊಣೆಯಾಗಿದೆ. ಕನ್ನಡ ಮಾಧ್ಯಮದ ಬಗ್ಗೆ ಕೀಳರಿಮೆ ಇಟ್ಟುಕೊಳ್ಳಬಾರದು ಎಂದು ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಮೋಹನ ಆಳ್ವರವರು ಹೇಳಿದರು
ಅವರು ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್ ವಸಂತ ಸಂಭ್ರಮ ಕಾರ್ಯಕ್ರಮದ ಜ.5ರಂದು ನಡೆದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.
ವಸಂತ ಸಂಭ್ರಮ ಸಮಿತಿಯ ಗೌರವಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕಾರ್ಯಕ್ರಮದ ಸಭಾಧ್ಯಕ್ಷತೆ ವಹಿಸಿದ್ದರು.
ಸಂಸದ ಬ್ರಿಜೇಶ್ ಚೌಟರವರು ಮಾತನಾಡಿ ಆರ್ಥಿಕ ಸಾಮಾಜಿಕ ಬೆಳವಣಿಗೆಗೆ ಸರಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ.ಸರಕಾರಿ ಶಾಲೆಗಳಲ್ಲಿ ಎಲ್ಲರಿಗೂ ಸಮಾನ ಅವಕಾಶ ಇದೆ.ಜೊತೆಯಾಗಿ ಕಲಿಯಲು ಅವಕಾಶ ಇದೆ.ಇಲ್ಲಿ ಮೇಲು ಕೀಳು ಎಂಬ ಬೇಧ ಭಾವ ಇಲ್ಲ ಎಂದು ಹೇಳಿದರು.
ವೇದಿಕೆಯಲ್ಲಿ ಕರ್ನಾಟಕ ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್, ಶಾಸಕಿ ಭಾಗೀರಥಿ ಮುರುಳ್ಯ,, ಮಾಜಿ ಶಾಸಕ ಕುಶಲ ಕೆ, ಮಾಜಿ ಸಚಿವ ಎಸ್.ಅಂಗಾರ, ವಸಂತ ಸಂಭ್ರಮ ಸಮಿತಿಯ ಸಂಚಾಲಕ ಎಸ್.ಎನ್.ಮನ್ಮಥ, ಅಧ್ಯಕ್ಷೆ ರಾಜೀವಿ ಆರ್.ರೈ, ಪ್ರಧಾನ ಕಾರ್ಯದರ್ಶಿ ಪ್ರದೀಪ್ ಕುಮಾರ್ ರೈ ಪನ್ನೆ, ವಿಶ್ರಾಂತ ಮುಖ್ಯ ಶಿಕ್ಷಕ ರಾಮಕೃಷ್ಣ ಭಟ್ ಚೂಂತಾರು, ಗ್ರಾಮ ಪಂಚಾಯತ್ ಸದಸ್ಯರಾದ ಅನಿಲ್ ರೈ ಪುಡ್ಕಜೆ, ದಿನೇಶ್ಚಂದ್ರ ಬಿ.ಹೆಗ್ಡೆ, ಶಿಕ್ಷಣ ಸಂಯೋಜಕಿ ಸಂಧ್ಯಾ ಕಾಲೇಜಿನ ಪ್ರಾಂಶುಪಾಲ ಜನಾರ್ಧನ ಎನ್,ಉಪಪ್ರಾಂಶುಪಾಲೆ ಉಮಾ ಕುಮಾರಿ,ಪ್ರಾಥಮಿಕ ಶಾಲಾ ಮುಖ್ಯ ಗುರು ಮಾಯಿಲಪ್ಪ ಜಿ. ಶಾಲಾ ಎಸ್.ಡಿ.ಎಂ.ಸಿ ಸದಸ್ಯರು ಉಪಸ್ಥಿತರಿದ್ದರು. ಶಾಲಾ ಎಸ್.ಡಿ.ಎಂ.ಸಿ.ಉಪಾಧ್ಯಕ್ಷ ಶ್ರೀನಾಥ ರೈ ಸ್ವಾಗತಿಸಿ, ಶಿಕ್ಷಕಿ ಗಾಯತ್ರಿ,ಲಿಂಗಪ್ಪ ಬೆಳ್ಳಾರೆ. ನಿರೂಪಿಸಿದರು. ವಿದ್ಯಾರ್ಥಿಗಳು ಪ್ರಾರ್ಥಿಸಿದರು.