ತುಮಕೂರು ನಗರದ ವಿಜಯನಗರ 2ನೇ ಮುಖ್ಯ ರಸ್ತೆಯಲ್ಲಿ ಕ್ಷುಲ್ಲಕ ವಿಚಾರಕ್ಕೆ 7ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ನಡೆದಿದೆ. ತ್ರಿಶಾಲ್ ಮೃತ ದುರ್ದೈವಿಯಾಗಿದ್ದು, ಮನೆಯಲ್ಲಿ ಯಾರು ಇಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈತ ಬಿಜೆಪಿ ಕಾರ್ಯಕರ್ತೆ ಶಂಕುತಲಾ ನಟರಾಜ್ ಅವರ ಪುತ್ರ ಆಗಿದ್ದು, ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದಾನೆ. ಪಾರಿವಾಳದ ಬೆಟ್ಟಿಂಗ್ ವಿಚಾರವಾಗಿ ಸ್ನೇಹಿತರ ಜೊತೆ ಗಲಾಟೆಯಾಗಿದೆ. ಅದೇ ವಿಚಾರಕ್ಕೆ ನೊಂದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಶಂಕಿಸಲಾಗಿದೆ