ಬೆಂಗಳೂರಿನಲ್ಲಿ ನಾಲ್ಕು ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದ ದುಷ್ಕರ್ಮಿಗಳು ರಾಕ್ಷಸಿ ಪ್ರವೃತ್ತಿ ಹೊಂದಿದವರು ಎಂದು ಶ್ರೀರಾಮಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಎಂದು ಹೇಳಿದ್ದಾರೆ.
ಜಮೀರ್ ಅಹ್ಮದ ಅವರೇ ಇದು ನಿಮ್ಮ ಕ್ಷೇತದಲ್ಲಾಗಿರುವ ಘಟನೆ ನಾನು ಇದನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದು ತಿಳಿಸಿದ್ದಾರೆ. ಜಮೀರ್ ಅವರು ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿದ್ದಾರೆ.
ಹಸುಗಳ ಕೆಚ್ಚಲು ಕೊಯ್ದು ನೀಚರನ್ನು ಬಂಧಿಸಿ ಉಗ್ರ ಶಿಕ್ಷೆಗೆ ಗುರಿಪಡಿಸಬೇಕು ಎಂದು ಆಗ್ರಹಿಸಿದರು.
ಒಂದು ವೇಳೆ ಈ ಪ್ರಕರಣದಲ್ಲಿ ಬೇಜವಾಬ್ದಾರಿ ಪ್ರದರ್ಶಿಸಿದರೆ ರಾಜ್ಯಾದ್ಯಂತ ಶ್ರೀರಾಮಸೇನೆ ಜಮೀರ್ ಅಹ್ಮದ್ ವಿರುದ್ಧ ಹೋರಾಟ ಮಾಡುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.