ಆಲೆಟ್ಟಿ ಗ್ರಾಮದ ಮಹಿಳೆಯೊಬ್ಬರು ಇಬ್ಬರು ಹೆಣ್ಣು ಮಕ್ಕಳೊಂದಿಗೆ ತಾಯಿ ನಾಪತ್ತೆಯಾಗಿದ್ದು, ಈ ಬಗ್ಗೆ ಸುಳ್ಯ ಠಾಣೆಯಲ್ಲಿ ದೂರು ದಾಖಲಾದ ಘಟನೆ ವರದಿಯಾಗಿದೆ. ಆಲೆಟ್ಟಿ ಗ್ರಾಮದ ಪರಿವಾರಕಾನ ನಿವಾಸಿ ನಂದಿನಿ (೨೭ವರ್ಷ)ಯವರು ತಮ್ಮ ಇಬ್ಬರು ಹೆಣ್ಣು ಮಕ್ಕಳೊಂದಿಗೆ ಮನೆಯಿಂದ ಕಾಣೆಯಾಗಿದ್ದಾರೆ.
ಪತಿ ರಾಜೇಂದ್ರ(೪೦) ಟೈಲ್ಸ್ ಕೆಲಸ ಮಾಡುವವರಾಗಿದ್ದು ಪರಿವಾರಕಾನ ದಲ್ಲಿ ಕುಟುಂಬ ಸಮೇತ ವಾಸವಾಗಿದ್ದರು. ಮಕ್ಕಳು ವೈಷ್ಣವಿ(೮ ವರ್ಷ) ಸೆಂಟ್ ಜೋಸೆಪ್ ಶಾಲೆ ೨ನೇ ತರಗತಿ ವಿದ್ಯಾರ್ಥಿನಿ. ಇನ್ನೊಬ್ಬಾಕೆ ೨ ವರ್ಷ ಪ್ರಾಯದ ಅನುಷ್ಕಾ ಅಂಗನವಾಡಿಗೆ ಹೋಗುತ್ತಿದ್ದರು.
ಕಳೆದ ಒಂದು ವಾರದ ಹಿಂದೆ ಗಂಡನು ತನ್ನ ಮೊಬೈಲ್‌ನಲ್ಲಿ ಯಾವಾಗಲು ರೀಲ್ಸ್ ನೋಡಿಕೊಂಡು ಕುಳಿತುಕೊಂಡಿರುವ ವಿಚಾರವಾಗಿ ಜಗಳವಾಗಿ ತನ್ನ ತವರು ಮನೆಗೆ ಮಕ್ಕಳೊಂದಿಗೆ ಹೋಗಿ ಬಂದಿದ್ದರು. ಇದೀಗ ಜ. ೭ ರಂದು ಬೆಳಿಗ್ಗೆ ೦೮ ಗಂಟೆಯಿಂದ ರಾತ್ರಿ ೮ ಗಂಟೆ ನಡುವೆ ತನ್ನ ಮನೆಯಿಂದ ತನ್ನ ಮಕ್ಕಳೊಂದಿಗೆ ಕಾಣೆಯಾಗಿರುವುದಾಗಿ ರಾಜೇಂದ್ರರವರು
ಸುಳ್ಯ ಪೊಲೀಸರು ದುರು ನೀಡಿದ್ದಾರೆ.ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.