ಬಿಜೆಪಿ ಯುವ ಮೋರ್ಚಾ ಸದಸ್ಯ ಹಾಗೂ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಸಂಚುಕೋರನನ್ನು ಬಂಧಿಸಲಾಗಿದೆ. ನಿಷೇಧಿತ ಪಿಎಫ್‌ಐ ಸದಸ್ಯನಾಗಿದ್ದ ಅತೀಕ್ ಅಹ್ಮದ್ ಎಂಬಾತನನ್ನು ಈ ಪ್ರಕರಣದಲ್ಲಿ ಬಂಧನ ಮಾಡಲಾಗಿದೆ. ಪ್ರವೀಣ್ ನೆಟ್ಟಾರು ಕೊಲೆ ಕೇಸ್‌ಗೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟ 21ನೇ ಆರೋಪಿ ಅತೀಕ್. ಈತ ಮುಸ್ತಫಾ ಪೈಚಾರ್‌ಗೆ ಆಶ್ರಯ ನೀಡಿದ್ದ ಎನ್ನಲಾಗಿದೆ. ಈ ಕುರಿತು ಎನ್‌ಐಎಯಿಂದ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಲಾಗಿದೆ.
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಪ್ರಮುಖ ಸಂಚುಕೋರನ ಬಂಧನ
