ಹೈಸ್ಕೂಲ್ ವಿದ್ಯಾರ್ಥಿಯೊಬ್ಬ ಮಗ್ಗಿ ತಪ್ಪು ಹೇಳಿದ್ದಾನೆ ಎಂದು ಆರೋಪಿಸಿ ಶಿಕ್ಷಕರೊಬ್ಬರು ಹೊಡೆದಿರುವ ಘಟನೆ ವರದಿಯಾಗಿದೆ. ಪುತ್ತೂರು ತಾಲೂಕು ಪಾಪೆಮಜಲು ಸರಕಾರಿ ಶಾಲೆಯಲ್ಲಿ ಘಟನೆ ನಡೆದಿದೆ ಎನ್ನಲಾಗಿದೆ.8ನೇ ತರಗತಿ ವಿದ್ಯಾರ್ಥಿ ಗಾಯಗೊಂಡವನು.
ಶಿಕ್ಷಕರು ನಾಗರಬೆತ್ತದಿಂದ ಹೊಡೆದಿರುವುದಾಗಿ ವಿದ್ಯಾರ್ಥಿಯ ಕುಟುಂಬ ಸದಸ್ಯರು ಆರೋಪಿಸಿದ್ದಾರೆ. ಈದರಿಂದ ಬಾಲಕನ ಎಡ ಕೈಗೆ ಗಾಯವಾಗಿರುವುದಾಗಿ ಮಾಹಿತಿ ನೀಡಿದ್ದಾರೆ. ವಿದ್ಯಾರ್ಥಿಯು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿರುವುದಾಗಿ ತಿಳಿದು ಬಂದಿದೆ.
ತಪ್ಪಿದ ಮಗ್ಗಿ ,ವಿದ್ಯಾರ್ಥಿಗೆ ಶಿಕ್ಷಕನಿಂದ ಬೆತ್ತದಿಂದ ಹೊಡೆತ
