ಕಲ್ಲಡ್ಕ ಪ್ರೈ ಓವರ್ ಹಾಗೂ ಸರ್ವೀಸ್ ರಸ್ತೆಯ
ಕಾಮಗಾರಿ ಬಹುತೇಕ ಮಾರ್ಚ್ ಅಂತ್ಯದಲ್ಲಿ ಪೂರ್ಣಗೊಳ್ಳಲಿದ್ದು ಏಪ್ರಿಲ್ ತಿಂಗಳಲ್ಲಿ ಸಂಚಾರಕ್ಕೆ ಮುಕ್ತಗೊಳಿಸುವ ಭರವಸೆಯನ್ನು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಹಿಸಿಕೊಂಡ ಕೆ.ಎನ್.ಆರ್.ಸಿ.ಕಂಪನಿ ತಿಳಿಸಿದೆ ಎಂದು ಸಂಸದ ಕ್ಯಾ.ಬ್ರಿಜೇಶ್ ಚೌಟ ತಿಳಿಸಿದರು.
ಅವರು ಇಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ ಉಳಿಪ್ಪಾಡಿಗುತ್ತು ಅವರ ಜೊತೆ ಬಿ.ಸಿ. ರೋಡಿನಿಂದ ಉಪ್ಪಿನಂಗಡಿವರೆಗಿನ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೀಕ್ಷಣೆ ನಡೆಸಿದ ಬಳಿಕ ಕಾಂಚನದಲ್ಲಿರುವ ಕೆ.ಎನ್.ಆರ್.ಸಿ.ಕಂಪೆನಿಯ ಪ್ಲಾಂಟ್ ನಲ್ಲಿ ಮಾಧ್ಯಮದವರ ಜೊತೆ ಮಾತನಾಡಿದರು.
ಕಲ್ಲಡ್ಕ ಪ್ರೈ ಓವರ್ ಹಾಗೂ ಸರ್ವೀಸ್ ರಸ್ತೆಯಕಾಮಗಾರಿ ಬಹುತೇಕ ಮಾರ್ಚ್ ಅಂತ್ಯದಲ್ಲಿ ಪೂರ್ಣ : ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
