ಸುಳ್ಯ ತಾಲೂಕಿನ ಅರಂತೋಡು ಗ್ರಾಮದ ಕೊಡಂಕೇರಿಯಲ್ಲಿ ಶ್ರೀ ಸ್ವಾಮಿ ಕೊರಗಜ್ಜ ದೈವದ ಕಾಲಾವಧಿ ನೇಮೋತ್ಸವ ಹಾಗೂ ಹರಕೆ ಕೋಲ ಫೆಬ್ರವರಿ 8ರಿಂದ ಆರಂಭಗೊಂಡಿದೆ.
ಫೆ.8ರಂದು ರಾತ್ರಿ ಗುಳಿಗನ ಕೋಲ ಮತ್ತು ಪ್ರಸಾದ ವಿತರಣೆ ನಡೆಯಿತು. ಬಳಿಕ ಶ್ರೀ ಸ್ವಾಮಿ ಕೊರಗಜ್ಜ ದೈವದ ನೇಮೋತ್ಸವ, ಅಗಲು ಸೇವೆ ಹಾಗೂ ಪ್ರಸಾದ ವಿತರಣೆ ಮಾಡಲಾಯಿತು.
ಸಾವಿರಾರು ಭಕ್ತರು ಆಗಮಿಸಿ ಕೊರಗಜ್ಜ ದೈವದ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.
ಫೆಬ್ರವರಿ 9ರಂದು ರಾತ್ರಿಯಿಂದ ಫೆಬ್ರವರಿ 10 ಸೋಮವಾರದ ತನಕ ಸ್ವಾಮಿ ಸ್ವಾಮಿ ಕೊರಗಜ್ಜ ದೈವದ ಹರಕೆ ಕೋಲ ನಡೆಯಲಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸ್ವಾಮಿ ಕೊರಗಜ್ಜನ ಕರಿಗಂಧ ಪ್ರಸಾದವನ್ನು ಪಡೆದು ದೈವದ ಕೃಪೆಗೆ ಪಾತ್ರರಾಗಬೇಕಾಗಿ ಆಡಳಿತ ಮಂಡಳಿಯವರು ವಿನಂತಿಸಿಕೊಂಡಿದ್ದಾರೆ.
ಅರಂತೋಡು : ಶ್ರದ್ಧಾ ಭಕ್ತಿಯಿಂದ ನಡೆದ ಶ್ರೀ ಸ್ವಾಮಿ ಕೊರಗಜ್ಜ ದೈವದ ಕೋಲ
